ಮುಂಬೈ:ಗಾನ ಕೋಗಿಲೆ ಎಂದೇ ಖ್ಯಾತರಾಗಿದ್ದ, ಭಾರತ ರತ್ನ ಪುರಸ್ಕೃತ ಗಾಯಕಿ ಲತಾ ಮಂಗೇಶ್ಕರ್ ಅವರ ಪಾರ್ಥಿವ ಶರೀರವು ಇದೀಗ ಪಂಚಭೂತಗಳಲ್ಲಿ ಲೀನವಾಗಿದೆ. ಮುಂಬೈನ ಶಿವಾಜಿ ಪಾರ್ಕ್​ನಲ್ಲಿ ಸರ್ಕಾರದ ಸಕಲ ಗೌರವಗಳೊಂದಿಗೆ ಅವರ ಅಂತ್ಯಸಂಸ್ಕಾರ ನಡೆಸಲಾಯಿತು.
ಪ್ರಧಾನಿ ನರೇಂದ್ರ ಮೋದಿ ಶಿವಾಜಿ ಪಾರ್ಕ್​ಗೆ ಭೇಟಿ ನೀಡಿ, ಲತಾ ಮಂಗೇಶ್ಕರ್ ಅವರಿಗೆ ಅಂತಿಮ ನಮನವನ್ನು ಸಲ್ಲಿಸಿದರು. ಅವರ ಆತ್ಮಕ್ಕೆ ಶಾಂತಿ ಕೋರಿ, ಕುಟುಂಬಸ್ಥರಿಗೆ ದುಃಖ ಸಹಿಸಿಕೊಳ್ಳುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದರು.
ಇದನ್ನೂ ಓದಿ:ಡಾ.ರಾಜಕುಮಾರ್ ಅವರ ಕಂಚಿನ ಪುತ್ಥಳಿ ಕಳವು; ಇಬ್ಬರು ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು
ಇನ್ನು ಲತಾ ಮಂಗೇಶ್ಕರ್ ಅವರ ಅಂತಿಮ ದರ್ಶನವನ್ನು ಅಮಿತಾಭ್ ಬಚ್ಚನ್, ಶಾರುಖ್​ ಖಾನ್​, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಮಾತ್ರವಲ್ಲದೆ ವಿವಿಧ ಕ್ಷೇತ್ರಗಳ ಹಲವಾರು ಗಣ್ಯರು ಪಡೆದರು.
ಅಲ್ಲದೆ ಈಶ ಫೌಂಡೇಷನ್​ನ ಸದ್ಗುರು, ಶ್ರೀಶ್ರೀ ರವಿಶಂಕರ್ ಗುರೂಜಿ ಸೇರಿ ಸಿನಿಮಾ, ರಾಜಕೀಯ, ಕ್ರೀಡೆ, ಉದ್ಯಮ ಸೇರಿ ಹಲವಾರು ಕ್ಷೇತ್ರಗಳ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್ ಕೂಡ ಲತಾ ಮಂಗೇಶ್ಕರ್​ ಅವರ ಅಗಲಿಕೆಗೆ ದುಃಖ ವ್ಯಕ್ತಪಡಿಸಿ ಸಂತಾಪ ಸೂಚಿಸಿದ್ದಾರೆ.
ಲತಾ ಮಂಗೇಶ್ಕರ್​ ಜತೆ ವಾಜಪೇಯಿಯನ್ನೂ ನೆನಪಿಸಿಕೊಳ್ಳುತ್ತಿರುವ ಅಭಿಮಾನಿಗಳು; ಕಾರಣಗಳಿವು…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + two =
Remember me
