ನವದೆಹಲಿ:ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಸೇರಿದಂತೆ ಮತ್ತಿಬ್ಬರು ಭಯೋತ್ಪಾದಕರು ಎನ್‌ಕೌಂಟರ್ ನಲ್ಲಿ ಹತರಾಗಿದ್ದಾರೆ.
ಇದನ್ನೂ ಓದಿ:ವ್ಹಾವ್​.. ಅಮೆರಿಕಾದಲ್ಲೂ ಇದೇ ದೃಶ್ಯ.. ಭಾರತೀಯರಿಗೆ ಅಚ್ಚರಿ!
ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನ ರೆಡ್ವಾನಿ ಪಯೆನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಸೋಮವಾರ ತಡರಾತ್ರಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದವು. ಇದು ಬುಧವಾರ ರಾತ್ರಿವರೆಗೂ ಮುಂದುವರಿದಿತ್ತು. ಈ ವೇಳೆ ಮೂವರು ಉಗ್ರರು ಭದ್ರತಾ ಪಡೆಗಳನ್ನು ಎದುರಿಸಿದರು. ಇದು ಎರಡೂ ಕಡೆಯಿಂದ ಗುಂಡಿನ ದಾಳಿಗೆ ಕಾರಣವಾಯಿತು. ಕಾರ್ಯಾಚರಣೆಯಲ್ಲಿ ಅಂತಿಮವಾಗಿ ಮೂವರು ಉಗ್ರರು ಹತರಾಗಿದ್ದಾರೆ.
ವಾಂಟೆಡ್ ಭಯೋತ್ಪಾದಕ ಬಸಿತ್ ಅಹ್ಮದ್ ದಾರ್, ಲಷ್ಕರ್-ಎ-ತೊಯ್ಬಾದ ಮೊಮಿನ್ ಗುಲ್ಜಾರ್ ಮತ್ತು ಫಹೀಮ್ ಅಹ್ಮದ್ ಬಾಬಾ ಮೃತ ಭಯೋತ್ಪಾದಕರು.
ಇವರು 18 ಮಂದಿ ಹತ್ಯೆಗೆ ಕಾರಣರಾಗಿದ್ದರು. ಇಂತಹ ದುಷ್ಕರ್ಮಿಗಳನ್ನು ಎನ್‌ಕೌಂಟರ್ ಮಾಡಿರುವುದು ದೊಡ್ಡ ಯಶಸ್ಸು ಎಂದು ಭದ್ರತಾ ಪಡೆಗಳು ತಿಳಿಸಿವೆ.ಮೇ 4 ರಂದು ಪೂಂಚ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ದಾಳಿಯಲ್ಲಿ ಭಾರತೀಯ ವಾಯುಪಡೆಯ ಅಧಿಕಾರಿಯೊಬ್ಬರು ಮೃತಪಟ್ಟಿದ್ದರು.
ಇತಿಹಾಸ ಸೃಷ್ಟಿಸಿದ ಮದ್ರಾಸ್ ಐಐಟಿ.. 513 ಕೋಟಿ ರೂಪಾಯಿ ದೇಣಿಗೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 15 =
Remember me
