ಗುವಾಹಟಿ:ಮಣಿಪುರದ ತಮೆಂಗ್​ಲಾಂಗ್ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಭೂ ಕುಸಿತು ಸಂಭವಿಸಿದ್ದು, ತಾಯಿ-ಮಗ ಸಾವನ್ನಪ್ಪಿದ್ದು, ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭೂ ಕುಸಿತದಿಂದಾಗಿ ಹಲವು ರಸ್ತೆಗಳಿಗೆ ಹಾನಿಯಾಗಿದೆ. ಈ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ.
ಇದನ್ನೂ ಓದಿ:ಕರ್ನಾಟಕದಲ್ಲೂ ಪ್ರವಾಹ, ಭೂಕುಸಿತ: ಕಟ್ಟೆಚ್ಚರ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಖಡಕ್​ ಸೂಚನೆ
ಭೂ ಕುಸಿತದಿಂದ ಪೊಲೀಸ್​ ಕಾನ್​ಸ್ಟೇಬಲ್​ವೊಬ್ಬರ ಮನೆಗೆ ಹಾನಿಯಾಗಿದ್ದು, ಈ ಘಟನೆಯಲ್ಲಿ ಅವಶೇಷಗಳಡಿಯಲ್ಲಿ ಕಾನ್​ಸ್ಟೇಬಲ್​ ಸಿಲುಕಿಕೊಂಡಿದ್ದಾರೆ. ಆದರೆ ಅವರ ಎರಡು ವರ್ಷದ ಮಗು ಹಾಗೂ ಪತ್ನಿ ಸಾವನ್ನಪ್ಪಿದ್ದಾರೆ.
ಗಾಯಗೊಂಡ ರಿಂಗ್‌ಸಿನ್‌ಲುಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಇಂಫಾಲ್‌ಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ದುರಂತ ಘಟನೆಗೆ ಸಂತಾಪ ಸೂಚಿಸಿದ್ದಾರೆ. “ತಮೆಂಗ್‌ಲಾಂಗ್ ವಾರ್ಡ್ ನಂ. 3, ಡಿಮ್‌ಥಾನ್‌ಲಾಂಗ್ ಗ್ರಾಮದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭೂಕುಸಿತದಿಂದಾಗಿ ತಾಯಿ-ಮಗು ಸಾವಿನ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಈ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಪೊಲೀಸ್ ಕಾನ್​ಸ್ಟೇಬಲ್​ ಅವರಿಗೆ ಅಗತ್ಯ ವೈದ್ಯಕೀಯ ಸೇವೆ ನೀಡಲು ಕ್ರಮಕೈಗೊಳ್ಳಲಾಗಿದೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಶಾಸಕ ದಿಂಗಂಗ್‌ಲಂಗ್ ಗ್ಯಾಂಗ್‌ಮೇ ಕೂಡ ತಮ್ಮ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಸಂತಾಪ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ.
ವಯನಾಡಿನಲ್ಲಿ ಗುಡ್ಡ ಕುಸಿತ: ಬಂಡೆ ಹಿಡಿದು ವ್ಯಕ್ತಿಯ ಜೀವನ್ಮರಣ ಹೋರಾಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
