ಹರಿಯಾಣ:ಮಹಿಳೆಯೊಬ್ಬರು ತನ್ನ 11 ವರ್ಷದ ಮಗನನ್ನು ಅಮಾನುಷವಾಗಿ ಥಳಿಸಿದ್ದಾರೆ. ಈ ವಿಚಾರವಾಗಿ ಬೇಸರಗೊಂಡ ಮಗುವಿನ ತಂದೆ, ಹೆಂಡತಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ಫರಿದಾಬಾದ್‌ನಲ್ಲಿ ನಡೆದಿದೆ.
ಮಹಿಳೆ ತನ್ನ ಮಗನಿಗೆ ಥಳಿಸುತ್ತಿರುವುದನ್ನು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಘಟನೆಗೆ ಸಂಬಂಧಿಸಿದ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕೆಲಸದಿಂದ ಸಂಜೆ ಮನೆಗೆ ಬಂದ ಪತಿ ಸಿಸಿಟಿವಿ ದೃಶ್ಯ ಕಂಡು ಬೆಚ್ಚಿ ಬಿದ್ದಿದ್ದಾನೆ. ಇಂತಹ ಅಮಾನುಷ ಕೃತ್ಯಗೈದ ಪತ್ನಿಯ ವಿರುದ್ಧ ಸ್ಥಳೀಯ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾನೆ.
ವಿಡಿಯೋದಲ್ಲಿ ಏನಿದೆ?: ಮಹಿಳೆ ತನ್ನ ಮಗುವಿಗೆ ಒದೆಯುವುದು ಕೂಡ ಕಂಡುಬಂದಿದೆ. ಹಲ್ಲೆಯ ಸಂದರ್ಭದಲ್ಲಿ ಮಗುವಿನ ತಂದೆ ಮಧ್ಯಪ್ರವೇಶಿಸಿ ಮಗುವನ್ನು ತನ್ನ ಕ್ರೂರ ತಾಯಿಯಿಂದ ರಕ್ಷಿಸಿದ ದೃಶ್ಯಾವಳಿಗಳು ಸಹ ಸೆರೆಯಾಗಿದೆ.
https://twitter.com/voiceformenind/status/1795093434107056242
ಮಕ್ಕಳ ಕಲ್ಯಾಣ ಸಮಿತಿಯ ಆದೇಶದ ಮೇರೆಗೆ ಸೂರಜ್‌ಕುಂಡ್ ಪೊಲೀಸ್ ಠಾಣೆಯು ತಾಯಿಯ ವಿರುದ್ಧ ಕ್ರೌರ್ಯ ಪ್ರಕರಣವನ್ನು ದಾಖಲಿಸಿದೆ. ಪ್ರಕರಣ ದಾಖಲಾದ ಬಳಿಕ ಮಹಿಳೆ ತನ್ನ ಮಗನನ್ನು ಕರೆದುಕೊಂಡು ತಾಯಿ ಮನೆಗೆ ಹೋಗಿದ್ದಾಳೆ ಎನ್ನಲಾಗಿದೆ.
VIDEO | ಶೌಚಾಲಯದಿಂದ ಏಕಕಾಲಕ್ಕೆ ಹೊರಬಂದ 35 ಹಾವುಗಳು… ವಿಡಿಯೋ ನೋಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 12 =
Remember me
