ದಾನೋಡ:ಹೆತ್ತ ತಾಯಿಯೊಬ್ಬಳು ತನ್ನ ಅವಳಿ ಹೆಣ್ಣು ಮಕ್ಕಳನ್ನು ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ಹರಿಯಾಣದ ದಾನೋಡ ಗ್ರಾಮದಲ್ಲಿ ನಡೆದಿದೆ.ಇದನ್ನೂ ಓದಿ:ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದ ಗಾಯಾಳುವಿನ ಮೇಲೆ ದರ್ಪ: ತಲೆ ಮೇಲೆ ಮೂತ್ರ ವಿಸರ್ಜನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದನೆಅವಳಿ ಹುಡುಗಿಯರಾದ ಜಾನಕಿ ಮತ್ತು ಜಾನ್ವಿ ಮೃತ ದುರ್ದೈವಿಗಳಾಗಿದ್ದು, ಶೀತಲ್ ಎಂಬಾಕೆಯೇ ಕೊಲೆಗೈದ ಆರೋಪಿಯಾಗಿದ್ದಾಳೆ. ತನ್ನ ಒಂಬತ್ತು ತಿಂಗಳ ಅವಳಿ ಹೆಣ್ಣು ಮಕ್ಕಳನ್ನು ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಚ್ಚಿ ಕೊಲೆ ಮಾಡಿದ ಆರೋಪದಡಿ ಆಕೆಯನ್ನು ಬಂಧಿಸಲಾಗಿದೆ. ಘಟನೆ ನಡೆದ 13 ದಿನಗಳ ನಂತರ ಆರೋಪಿಯು ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದು, ನಂತರ ಆಕೆಯ ಪತಿ ದೂರು ದಾಖಲಿಸಿದ್ದಾರೆ.ಪತಿಯು ಜುಲೈ 12ರಂದು ಹೊಲಕ್ಕೆ ಕೆಲಸಕ್ಕೆ ಹೋಗಿದ್ದು, ಮಧ್ಯಾಹ್ನ ಮನೆಗೆ ಬಂದಾಗ ಮನೆಯ ಹೊರಗೆ ಜನಸಂದಣಿ ಇತ್ತು. ಮನೆಯೊಳಗೆ ಹೋದಾಗ ಮಕ್ಕಳು ಸತ್ತಿದ್ದಾರೆ ಎಂದು ಶೀತಲ್ ಮಾತನ್ನು ನಂಬಿದ್ದ ಪತಿ ಹಾಗೂ ಕುಟುಂಬದವರು ಆಘಾತಕ್ಕೊಳಗಾಗಿದ್ದು ಮರಣೋತ್ತರ ಪರೀಕ್ಷೆ ನಡೆಸದೇ ಮಕ್ಕಳನ್ನು ಹಾಗೇ ಸಮಾಧಿ ಮಾಡಿದ್ದರು.ಇದನ್ನೂ ಓದಿ:ನದಿಯಿಂದ ಡಾಲ್ಫಿನ್ ಹಿಡಿದು ತಿಂದ ಮೀನುಗಾರರು: ಪ್ರಕರಣ ದಾಖಲಿಸಿ ಓರ್ವನನ್ನು ಬಂಧಿಸಿದ ಪೊಲೀಸರುಸದ್ಯ, ಕೊನೆಗೆ ತಾಯಿಯೇ ಮಕ್ಕಳನ್ನು ಒಪ್ಪಿಕೊಂಡಿರುವುದರಿಂದ ಪೊಲೀಸರು ಸಮಾಧಿ ಮಾಡಿದ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ. ಕೊಲೆಗೆ ನೈಜ ಕಾರಣವು ತನಿಖೆಯಿಂದ ತಿಳಿದು ಬರಬೇಕಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + fifteen =
Remember me
