ದೇಶಾದ್ಯಂತ ಕರೊನಾಪ್ರಕರಣ ಹೆಚ್ಚಳಕ್ಕೆ ಕಾರಣವಾಗಿರುವ ತಬ್ಲಿಘಿ ಜಮಾತ್ ಸಂಘಟನೆಯ ಮುಖ್ಯಸ್ಥ ಮೌಲಾನಾ ಸಾದ್ ಖಂಡಲ್ವಿ ದೆಹಲಿಯ ಜಾಕೀರ್ ನಗರದ ತನ್ನ ನಿವಾಸದಲ್ಲೇ ಪತ್ತೆಯಾಗಿದ್ದಾರೆ. ಸಾದ್ ಮನೆಯಲ್ಲೇ ಕ್ವಾರಂಟೈನ್​ಗೆ ಒಳಗಾಗಿದ್ದಾರೆ ಎಂದು ಆತನ ಸಂಬಂಧಿಕರು ಹೇಳಿದ್ದು, ಕರೊನಾ ಸೋಂಕು ತಗುಲಿದೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ ವಿಡಿಯೋ ಕಾನ್ಪರೆನ್ಸ್ ಮೂಲಕ ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ಅವರಿಗೆ ತಮ್ಮ ಮನೆಯಲ್ಲೇ ಕ್ವಾರಂಟೈನ್ ಮುಂದುವರಿಸಲು ಅವಕಾಶ ನೀಡಲಾಗುತ್ತದೆಯೇ? ಅಥವಾ ಸರ್ಕಾರದಿಂದ ನಡೆಸಲ್ಪಡುತ್ತಿರುವ ಕ್ವಾರಂಟೈನ್ ಕೇಂದ್ರಗಳಿಗೆ ಕರೆದುಕೊಂಡು ಹೋಗಲಾಗುತ್ತದೆಯೇ? ಎಂಬ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ.
ಸರ್ಕಾರದ ಲಾಕ್​ಡೌನ್ ಆದೇಶ ಉಲ್ಲಂಘಿಸಿ ದೆಹಲಿಯ ನಿಜಾಮುದ್ದೀನ್​ನಲ್ಲಿ ಸಾವಿರಾರು ಜನರನ್ನು ಸೇರಿಸಿ ಸಭೆ ನಡೆಸಿದ ಹಿನ್ನೆಲೆ ಮೌಲಾನಾ ಸಾದ್ ಸೇರಿ ಒಟ್ಟು 6 ಜನರ ಮೇಲೆ ಎಫ್​ಐಆರ್ ದಾಖಲಿಸಲಾಗಿದ್ದು, ಕಾರ್ಯಕ್ರಮ ಆಯೋಜಿಸಿದ್ದ ಬಗ್ಗೆ ವರದಿ ನೀಡುವಂತೆ ಪೊಲೀಸರು ಕೇಳಿದ್ದಾರೆ. ಈ ನಡುವೆ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮರಳಿದ್ದ ಪ್ರಯಾಣ ಇತಿಹಾಸ (ಟ್ರಾವೆಲ್ ಹಿಸ್ಟರಿ)ಮುಚ್ಚಿಟ್ಟಿದ್ದ ಇಬ್ಬರ ವಿರುದ್ಧ ಜಮ್ಮು- ಕಾಶ್ಮೀರದ ಉದಮ್ುರ್​ನಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ದೆಹಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಬಳಿಕ ಈ ಇಬ್ಬರು ಉತ್ತರಪ್ರದೇಶದ ವಿವಿಧೆಡೆ ಸಂಚರಿಸಿ ಜಮ್ಮು-ಕಾಶ್ಮೀರಕ್ಕೆ ಮರಳಿದ್ದರು.
ಕರ್ನಾಟಕದ ನಾಲ್ವರಿಗೆ ಕರೊನಾ
ಮಧ್ಯಪ್ರದೇಶದ ಖಂಡ್ವಾದಲ್ಲಿರುವ ಕರ್ನಾಟಕ ಮೂಲದ ನಾಲ್ವರು ತಬ್ಲಿಘಿ ಜಮಾತ್ ಸದಸ್ಯರಲ್ಲಿ ಕರೊನಾ ಸೋಂಕು ದೃಢಪಟ್ಟಿದೆ. ಒಟ್ಟು 17 ತಬ್ಲಿಘಿ ಸದಸ್ಯರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಕರ್ನಾಟಕ ಮೂಲದ ನಾಲ್ವರ ವರದಿ ಪಾಸಿಟಿವ್ ತೋರಿಸಿದೆ. ಉಳಿದವರ ವರದಿಗಳಿಗಾಗಿ ಕಾಯಲಾಗುತ್ತಿದೆ ಎಂದು ಖಂಡ್ವಾದ ಜಿಲ್ಲಾಧಿಕಾರಿ ತನ್ವಿ ಸುಂದರಿಯಲ್ ಮಾಹಿತಿ ನೀಡಿದ್ದಾರೆ.
ಕರೊನಾ ವಿಷಯದಲ್ಲಿ ರಾಜಕೀಯ ಮಾಡೋದು ಬೆಂಕಿ ಜತೆ ಸರಸವಾಡಿದಂತೆ: ಟ್ರಂಪ್​​ಗೆ ವಿಶ್ವ ಆರೋಗ್ಯ ಸಂಸ್ಥೆ ಚಾಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
