ಮಧ್ಯಪ್ರದೇಶ:ಕಳೆದ ಒಂದೆರೆಡು ದಿನಗಳಿಂದ ದೇಶದಲ್ಲಿ ಭಾರೀ ವಿವಾದಕ್ಕೆ ಗುರಿಯಾಗಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ, ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ನೀಡಿದ ಸನಾತನ ಧರ್ಮದ ನಿರ್ಮೂಲನೆಯ ಹೇಳಿಕೆಗೆ ಇದೀಗ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ತಿರುಗೇಟು ಕೊಟ್ಟಿದ್ದಾರೆ.
ಇದನ್ನೂ ಓದಿ:9 ರಿಂದ ಮಣ್ಣಿನ ಗಣೇಶ ಮೂರ್ತಿಗಳ ಬಳಕೆ ಕಾರ್ಯಾಗಾರ
ಗುರುವಾರ (ಸೆಪ್ಟಂಬರ್​ 06) ಜನ್ಮಾಷ್ಟಮಿ ಸಂದರ್ಭದಲ್ಲಿ ಮಾತನಾಡಿದ ಶಿವರಾಜ್ ಸಿಂಗ್ ಚೌಹಾಣ್, ಮಹಾಭಾರತದ ‘ಯದಾ ಯದಾ ಹಿ ಧರ್ಮಸ್ಯ’ ಶ್ಲೋಕವನ್ನು ಪಠಿಸಿ, ತದನಂತರ “ಸನಾತನ ಧರ್ಮವನ್ನು ವಿರೋಧಿಸುವವರ ರಾಜಕೀಯ ಅಂತ್ಯ ನಿಶ್ಚಿತ. ಸನಾತನ ಧರ್ಮಕ್ಕೆ ಯಾವುದೇ ಆರಂಭ ಅಥವಾ ಅಂತ್ಯವಿಲ್ಲ” ಎಂದು ಹೇಳುವ ಮುಖೇನ ಸ್ಟಾಲಿನ್​ ಪುತ್ರನ ಹೇಳಿಕೆಗೆ ತಿರುಗೇಟು ನೀಡಿದರು.
ಇದನ್ನೂ ಓದಿ:ಅನಿಷ್ಟ ಆಚರಣೆಗಳು ತೊಲಗಲಿ: ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕಿ ಡಾ.ಭಾಗ್ಯಲಕ್ಷ್ಮೀ ವಿ. ಆಶಯ
ವಿವಾದಕ್ಕೆ ಕಾರಣವೇನು?:ಡಿಎಂಕೆ ನಾಯಕ ಮತ್ತು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಸೊಳ್ಳೆ, ಡೆಂಗ್ಯೂ, ಮಲೇರಿಯಾ, ಜ್ವರ ಮತ್ತು ಕರೋನಾದೊಂದಿಗೆ ಹೋಲಿಸಿದ್ದು, ಈ ರೋಗಗಳಂತೆಯೇ ಇದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದರು. ಸದ್ಯ ಈ ಹೇಳಿಕೆಗೆ ದೇಶದೆಲ್ಲೆಡೆ ಭಾರೀ ವಿರೋಧ, ಟೀಕೆ ವ್ಯಕ್ತವಾಗಿದೆ,(ಏಜೆನ್ಸೀಸ್).
ವಾಮಾಚಾರ ಕಲಿಯುತ್ತಿದ್ದ ಎಂದು ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆಯರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
