ಭೋಪಾಲ್:ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಕರೆಯಲ್ಪಡುತ್ತಿರುವ ಪಂಚರಾಜ್ಯ ಚುನಾವಣೆಯ ಫಲಿತಾಂಶ ಡಿಸೆಂಬರ್​ 03ರಂದು ಹೊರಬೀಳಲಿದ್ದು, ಈ ಮಧ್ಯೆ ಎಕ್ಸಿಟ್​ ಪೋಲ್​ಗಳ ರಿಸಲ್ಟ್​ ಆಧರಿಸಿ ರಾಜಕೀಯ ಪಕ್ಷಗಳ ನಾಯಕರು ಗೆಲವು ತಮ್ಮದೇ ಎಂಬ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್​ ನಾಯಕರು ಮಾತ್ರ ಈ ಬಗ್ಗೆ ಅಪಸ್ವರ ತೆಗೆದಿದ್ದು ಬಿಜೆಪಿ ವಿರುದ್ಧ ಆರೋಪಿಸಿದೆ.
ಎಕ್ಸಿಟ್​ ಪೋಲ್​ ವರದಿಗಳ ಕುರಿತು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶ ಕಾಂಗ್ರೆಸ್​ ಘಟಕದ ಅಧ್ಯಕ್ಷ ಕಮಲ್​ನಾಥ್​, ಅಧಿಕಾರಿಗಳ ಮೇಲೆ ಒತ್ತಡ ಹೇರಲು ಉದ್ದೇಶಪೂರ್ವಕವಾಗಿ ಫಲಿತಾಂಶಗಳನ್ನು ಬಿಡುಗಡೆ ಮಾಡಲಾಗಿದೆ. ಕಾರ್ಯಕರ್ತರು ಯಾರು ಹೆದರುವ ಅವಶ್ಯಕತೆಯಿಲ್ಲ ಕಾಂಗ್ರೆಸ್​ ಈಗಾಗಲೇ ಗೆದ್ದಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
कांग्रेस के सभी कार्यकर्ता पूरी ताकत से मैदान में आ जाएं। भाजपा चुनाव हार चुकी है। कुछ एग्जिट पोल जानबूझकर इसलिए बनाए गए हैं कि कांग्रेस कार्यकर्ता निराश हों और झूठा माहौल दिखाकर अधिकारियों पर दबाव बनाया जाए।यह षड्यंत्र कामयाब होने वाला नहीं है। कांग्रेस के सभी पदाधिकारी, जिला…pic.twitter.com/dEqLAuNMAT
ಇದನ್ನೂ ಓದಿ:ಭಾರತದ ಎದುರು ಟಾಸ್​ ಗೆದ್ದು ಬೌಲಿಂಗ್ ಆಯ್ದ ಆಸೀಸ್​; ಎರಡು ತಂಡದಲ್ಲಿ ಪ್ರಮುಖ ಬದಲಾವಣೆ
ರಾಜ್ಯದಲ್ಲಿ ಈಗಾಗಲೇ ಕಾಂಗ್ರೆಸ್​ ಪರವಾದ ವಾತವರಣ ನಿರ್ಮಾಣವಾಗಿದ್ದು, ಸೋಲುವ ಭೀತಿಯಿಂದ ಬಿಜೆಪಿ ಈ ರೀತಿಯ ಸುಳ್ಳು ಫಲಿತಾಂಶಗಳನ್ನು ಪ್ರಕಟಿಸುತ್ತಿದೆ. ಫಲಿತಾಂಶ ಪ್ರಕಟವಾಗುವ ಮುನ್ನ ಬಿಜೆಪಿ ಅಧಿಕಾರಿಗಳ ಮೇಲೆ ಒತ್ತಡ ಹೇರಲು ಈ ರೀತಿಯ ತಂತ್ರ ಅನುಸರಿಸುತ್ತಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹೆದರದೆ ಭಾನುವಾ ಫ್ರಕಟವಾಗುವ ಫಲಿತಾಂಶದ ಮೇಲೆ ಭರವಸೆ ಇಡಿ ಎಂದು ಹೇಳಿದ್ದಾರೆ.
ಈ ರೀತಿಯ ಸಂಚು ಯಾವತ್ತಿಗೂಈ ಯಶಸ್ವಿಯಾಗುವುದಿಲ್ಲ. ಹಿಂಬಾಗಿಲಿನಿಂದ ಅಧಿಕಾರ ಹಿಡಿಯುವ ಬಿಜೆಪಿಗೆ ಈ ಬಾರಿ ಚುನಾವಣೆಯಲ್ಲಿ ಸೋಲು ನಿಶ್ಚಿತವಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ರಚಿಸುವುದು ಖಚಿತ ಎಂದು ಮಧ್ಯಪ್ರದೇಶ ಕಾಂಗ್ರೆಸ್​ ಘಟಕದ ಅಧ್ಯಕ್ಷ ಕಮಲ್​ನಾಥ್​ ಭವಿಷ್ಯ ನುಡಿದಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:17 + twelve =
Remember me
