ನವದೆಹಲಿ:ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಗೆ ಗೃಹ ಸಚಿವರೊಬ್ಬರು ಕಾನೂನುಕ್ರಮದ ಎಚ್ಚರಿಕೆ ನೀಡಿದ್ದಾರೆ. ಪ್ರಿಯಾಂಕಾ ಗಾಂಧಿ ಸೋಷಿಯಲ್ ಮೀಡಿಯಾದಲ್ಲಿ ಮಾಡಿದ್ದ ಪೋಸ್ಟ್​ವೊಂದರ ಹಿನ್ನೆಲೆಯಲ್ಲಿ ಇಂಥದ್ದೊಂದು ಎಚ್ಚರಿಕೆ ನೀಡಲಾಗಿದೆ.
ಹೀಗೆ ಪ್ರಿಯಾಂಕಾ ಗಾಂಧಿಗೆ ಕಾನೂನುಕ್ರಮದ ಎಚ್ಚರಿಕೆ ನೀಡಿದ್ದು ಮಧ್ಯಪ್ರದೇಶದ ಗೃಹಸಚಿವ ನರೋತ್ತಮ್ ಶರ್ಮಾ. ಬಿಜೆಪಿ ನೇತೃತ್ವದ ಮಧ್ಯಪ್ರದೇಶದ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಪ್ರಿಯಾಂಕಾ ಗಾಂಧಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಕ್ಕೆ ಶರ್ಮಾ ಈ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ:ಕಳವಾದ ಮೊಬೈಲ್‌ಫೋನ್ ಪತ್ತೆ ಹಚ್ಚಿ ವಾರಸುದಾರರಿಗೆ ಒಪ್ಪಿಸುವಲ್ಲಿ ಕರ್ನಾಟಕ ಪೊಲೀಸರೇ ಪ್ರಥಮ!
ಪ್ರಿಯಾಂಕಾ ಗಾಂಧಿ ಮಾಡಿದ್ದ ಸೋಷಿಯಲ್ ಮೀಡಿಯಾ ಪೋಸ್ಟ್​ಗೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಕೆಲವರ ವಿರುದ್ಧ ಎಫ್​ಐಆರ್ ದಾಖಲಿಸಿಕೊಂಡಿದೆ. ಅದರ ಮುಂದುವರಿದ ಭಾಗವಾಗಿ ಇದೀಗ ಪ್ರಿಯಾಂಕಾ ಗಾಂಧಿಗೆ ಕಾನೂನುಕ್ರಮದ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ:ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!
ಸರ್ಕಾರದ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪಕ್ಕೆ ಸೂಕ್ತ ದಾಖಲೆ ಕೊಡಬೇಕು, ಯಾವ ಆಧಾರದ ಮೇಲೆ ಆರೋಪ ಮಾಡಲಾಗಿದೆ ತಿಳಿಸಬೇಕು. ತಪ್ಪಿದಲ್ಲಿ ಕಾನೂನುಕ್ರಮ ಜರುಗಿಸುವ ಅವಕಾಶ ಬಿಜೆಪಿ ಪಕ್ಷ ಮತ್ತು ಸರ್ಕಾರದ ಬಳಿ ಇದೆ ಎಂಬುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. –ಏಜೆನ್ಸೀಸ್
ವೈದ್ಯರು ಜನರಿಕ್ ಔಷಧ ಬರೆಯುವುದು ಕಡ್ಡಾಯ, ತಪ್ಪಿದರೆ ದಂಡ: ರಾಷ್ಟ್ರೀಯ ವೈದ್ಯಕೀಯ ಆಯೋಗ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
