ಭೋಪಾಲ್​:ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೋರ್ವ ತನ್ನ ಇಬ್ಬರು ಮಕ್ಕಳನ್ನು ಉಲ್ಟಾ ನೇತು ಹಾಕಿ ಮನಬಂದಂತೆ ಥಳಿಸಿ ವಿಡಿಯೋ ಮಾಡಿ ವಿಕೃತಿ ಮೆರೆದಿರುವ ಘಟನೆ ಮಧ್ಯಪ್ರದೇಶದ ಅಶೋಕ್​ನಗರ ಜಿಲ್ಲೆಯ ಚಂದೇರಿ ಗ್ರಾಮದಲ್ಲಿ ನಡೆದಿದೆ.
ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ 4-5 ವರ್ಷ ಆಸುಪಾಸಿನ ಇಬ್ಬರು ಮಕ್ಕಳನ್ನು ಉಲ್ಟಾ ನೇತು ಹಾಕಿರುವ ವ್ಯಕ್ತಿ ಅವರನ್ನು ಮನಬಂದಂತೆ ಥಳಿಸುತ್ತಿದ್ದು, ಬಳಿಕ ಅದರ ವಿಡಿಯೋವನ್ನು ತನ್ನಿಂದ ಪ್ತತ್ಯೇಕವಾಗಿ ವಾಸಿಸುತ್ತಿರುವ ಪತ್ನಿಗೆ ಕಳುಹಿಸುತ್ತಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಇದನ್ನೂ ಓದಿ: ರಾಹುಲ್​ ಗಾಂಧಿ ಹಿಂದು ಧರ್ಮವನ್ನು ಅವಮಾನಿಸಿಲ್ಲ, ಅವರ ಹೇಳಿಕೆಯನ್ನು ತಿರುಚಲಾಗಿದೆ: ಅವಿಮುಕ್ತೇಶ್ವರಾನಂದ ಶ್ರೀ
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಅಶೋಕ್​ನಗರ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಭಗವಾನ್​ ದಾಸ್​ ಎಂಬ ವ್ಯಕ್ತಿಯು ರಾಧಾ ಎಂಬುವವರನ್ನು ಮದುವೆಯಾಗಿದ್ದ. ರಾಧಾಗೆ ಈಗಾಗಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದು, ಭಗವಾನ್​ ದಾಸ್​ ಎರಡನೇ ಪತಿ ಎಂದು ತಿಳಿದು ಬಂದಿದೆ. ಭಗವಾನ್​ ದಾಸ್​ನಿಂದ ರಾಧಾ ಕಳೆದ ಒಂದು ವರ್ಷದಿಂದ ದೂರ ಉಳಿದಿದ್ದು, ಮಕ್ಕಳನ್ನು ಪತಿಯ ಬಳಿ ಬಿಟ್ಟು ಹೋಗಿದ್ದಳು.
ಯಾವ ಕಾರಣಕ್ಕೆ ಮಕ್ಕಳ ಮೇಲೆ ಈ ರೀತಿ ಹಲ್ಲೆ ಮಾಡಲಾಗಿದೆ ಎಂಬುದು ತಿಳಿದು ಬಂದಿಲ್ಲ. ದೂರವಾಗಿರುವ ಹೆಂಡತಿಯನ್ನು ಹತ್ತಿರ ಮಾಡಿಕೊಳ್ಳಲು ಈ ರೀತಿ ಮಾಡಿದ್ದಾನಾ ಎಂಬುದು ತಿಳಿದು ಬಂದಿಲ್ಲ. ವಿಡಿಯೋವನ್ನು ನೋಡುತ್ತಿದ್ದಂತೆ ಪತ್ನಿ ಪತಿಯ ವಿರುದ್ಧ ದೂರು ದಾಖಲಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ನಡೆಯುತ್ತಿದ್ದು, ಹೇಳಿಕೆಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:one × four =
Remember me
