ಜೈಪುರದಲ್ಲಿನಡೆದ ಮಿಸೆಸ್ ಇಂಡಿಯಾ ಐ ಆಮ್ ಪವರ್‍ಫುಲ್ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಶಿಲ್ಪಾ ಸುಧಾಕರ್, ರಶ್ಮಿ ರಂಗಪ್ಪ, ಸುಪ್ರೀತಾ ಹಾಗೂ ಕಾವ್ಯ ಪ್ರಶಸ್ತಿ ಗೆದ್ದುಕೊಂಡರು.
ಮಿಸೆಸ್ ಇಂಡಿಯಾ ಐ ಆಮ್ ಪವರ್‍ಫುಲ್ ಯೂನಿವರ್ಸ್ ವಿಭಾಗದ ಕಿರೀಟವನ್ನು ಶಿಲ್ಪಾ ಗೆದ್ದುಕೊಂಡರೆ, ಐ ಆಮ್ ಪವರ್‍ಫುಲ್ ವಲ್ರ್ಡ್ ವಿಭಾಗದಲ್ಲಿ ರಶ್ಮಿ, ಏಷ್ಯಾ ವಿಭಾಗದಲ್ಲಿ ಸುಪ್ರೀತಾ, ಕರ್ವಿ ವಲ್ರ್ಡ್ ವಿಭಾಗದಲ್ಲಿ ಕಾವ್ಯ ಕಿರೀಟ ಜಯಿಸಿದರು. ನಿರ್ಮಲಾ, ಹೇಮಾ, ಸ್ನೇಹ, ಸಿಂಧು ರನ್ನರ್ ಅಪ್ ಆದರು.
ನಂದಿನಿ ನಾಗರಾಜ್ ಹಾಗೂ ಜಸ್ಪ್ರೀತ್ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಬೆಂಗಳೂರಿನಿಂದ 10 ರೂಪದರ್ಶಿಯರ ತಂಡ ಜೈಪುರಕ್ಕೆ ತೆರಳಿತ್ತು. ಒಟ್ಟು 40 ಸ್ಪರ್ಧಿಗಳು ಭಾಗವಹಿಸಿದ್ದರು.
ವಿಂಟೇಜ್, ಗೌನ್, ಎಥ್‍ನಿಕ್, ಟ್ಯಾಲೆಂಟ್ ಸುತ್ತುಗಳಲ್ಲಿ ರೂಪದರ್ಶಿಯರು ರ್ಯಾಂಪ್ ಮೇಲೆ ಹೆಜ್ಜೆ ಹಾಕಿದರು.
“ಬೇರೆ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಂದ ಬಂದಿದ್ದ ರೂಪದರ್ಶಿಯರು ರ್ಯಾಂಪ್ ಮೇಲೆ ಹೆಜ್ಜೆ ಹಾಕಿದರು. ತೆಳ್ಳಗೆ, ಬೆಳ್ಳಗೆ ಇರುವವರು, ಎತ್ತರ, ದಪ್ಪ, ವಯಸ್ಸನ್ನು ನೋಡಿ ಈ ಸ್ಪರ್ಧೆಗೆ ಆಯ್ಕೆ ಮಾಡಲಾಗಿಲ್ಲ. ಬದಲಾಗಿ ಅವರಿಗೆ ಇರುವ ಅರ್ಹತೆ ಹಾಗೂ ಆತ್ಮವಿಶ್ವಾಸವೇ ನಮ್ಮ ಸ್ಪರ್ಧೆಯ ಮಾನದಂಡವಾಗಿತ್ತು’ ಎಂದು ಆಯೋಜಕಿ ನಂದಿನಿ ನಾಗರಾಜ್ ಹೇಳಿದರು.
ಬೆಂಗಳೂರಿನ ತಂಡ ಜೈಪುರದಲ್ಲಿ ಒಟ್ಟು ನಾಲ್ಕು ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ಈ ತಂಡ ಮುಂದಿನ ವರ್ಷ ಸಿಂಗಪುರದಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ದೇಶವನ್ನು ಪ್ರತಿನಿಧಿಸಲಿದೆ.

ಆರು ಗಂಟೆ ಜಾಲತಾಣ ಸ್ಥಗಿತ; ಕಂಗೆಟ್ಟ ಬಳಕೆದಾರರು- ಏಳು ಬಿಲಿಯನ್‌ ಡಾಲರ್‌ ಕಳೆದುಕೊಂಡ ಜುಕರ್‌ಬರ್ಗ!

ಪಾರ್ಟಿಯಲ್ಲಿ ಆಡಿದ ಆ ಒಂದು ಮಾತು, ಸಮಂತಾರ ನಿರ್ಧಾರವೇ ಡಿವೋರ್ಸ್​ಗೆ ಕಾರಣವಾಯ್ತಾ? ಇಬ್ಬರ ಅಹಂ ಕತೆಯಿದು..?!

ಮೋದಿಜೀ ನೀವು ಲಾಖಿಂಪುರ್​ ಖೇರಿಗೆ ಹೋಗುವಿರಾ? ಪ್ರಧಾನಿಗೆ ಪ್ರಿಯಾಂಕಾ ಗಾಂಧಿ ಸವಾಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − eight =
Remember me
