ರಾಂಚಿ:ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ, ಕ್ಯಾಪ್ಟನ್​ ಕೂಲ್​ ಎಂದೇ ಹೆಸರುವಾಸಿಯಾಗಿದ್ದ ಮಹೇಂದ್ರ ಸಿಂಗ್ ಧೋನಿ ತಮ್ಮ ವಿನಮ್ರತೆಗೆ ಹೆಸರುವಾಸಿಯಾಗಿದ್ದಾರೆ. ತಮ್ಮ ಸೌಮ್ಯ ಸ್ವಭಾವದಿಂದಲೇ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಎಂಎಸ್​ಡಿ ಆಗಿಂದಾಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಕೆಲಸಗಳ ಮೂಲಕ ಹೆಚ್ಚು ಸದ್ದು ಮಾಡುತ್ತಿರುತ್ತಾರೆ.
ಇದೀಗ ಹೊಸ ವಿಚಾರ ಒಂದರಲ್ಲಿ ಎಂ.ಎಸ್. ಧೋನಿ ತಮ್ಮ ಅಭಿಮಾನಿಯೊಬ್ಬರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರಿಗೆ ಶುಭ ಹಾರೈಸಿದ್ದಾರೆ. ಇದರ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ.
Mahi spreading birthday warmth with a heartfelt hug to a lucky fan!🎂#msdhoni#msd#sdcworld#thaladhonipic.twitter.com/5IeDVbHOaQ
ಇದನ್ನೂ ಓದಿ:ನಟಿ ತ್ರಿಶಾ ವಿರುದ್ಧ ಮಾನನಷ್ಟ ಮೊಕದ್ದಮೆ; ನಟ ಮನ್ಸೂರ್​ಗೆ ​ ಛೀಮಾರಿ ಹಾಕಿದ ಕೋರ್ಟ್
ವೈರಲ್​ ಆಗಿರುವ ವಿಡಿಯೋದಲ್ಲಿ ಅಭಿಮಾನಿಯೊಬ್ಬರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಎಂಎಸ್​ಡಿ ಬರ್ತ್​ಡೇ ಬಾಯ್​ಗೆ ಶುಭ ಹಾರೈಸುತ್ತಾರೆ. ಬಳಿಕ ಆತನನ್ನು ತಬ್ಬಿ ಹಿಡಿಯುವ ಎಂಎಸ್​ಡಿ ಎಲ್ಲರಿಗೂ ಕೇಕ್​ ಬಳಿಯುವಂತೆ ಹೇಳುತ್ತಾರೆ. ಬಳಿಕ ಕೊನೆಯಲ್ಲಿ ಎಲ್ಲರಿಗೂ ಖುಷಿನಾ ಎಂದು ಹೇಳುತ್ತಿರುವುದನ್ನು ನೋಡಬಹುದಾಗಿದೆ.
ಈ ವಿಡಿಯೋ ಎಲ್ಲೆಡೆ ವೈರಲ್​ ಆಗಿದ್ದು, ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ. ಆ ಬರ್ತ್​ಡೇ ಬಾಯ್​ ನಾನಾಗಬಾರದಿತ್ತಾ ಎಂದು ಹಲವರು ಕಮೆಂಟ್​ ಮಾಡಿದ್ದಾರೆ. ಈ ನಿಮ್ಮ ಸರಳ ವ್ಯಕ್ತಿತ್ವಕ್ಕೆ ನೀವು ಯಾವತ್ತಿದರೂ ಸ್ಪೆಷಲ್ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 × 5 =
Remember me
