ಅಮೆರಿಕಾ:ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಾ ಪ್ರವಾಸದಲ್ಲಿದ್ದಾರೆ. ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಜತೆ ಔತಣಕೂಟದಲ್ಲಿ ಮೋದಿ ಭಾಗಿಯಾಗಿದ್ದಾರೆ.  ಈ ಜೌತಣಕೂಟಕ್ಕೆ ವಿಶೇಷ ಅತಿಥಿಗಳಾಗಿ ಭಾರತೀಯ ಉದ್ಯಮಿಗಳಾದ ಮುಕೇಶ್- ನೀತಾ ಅಂಬಾನಿ ಭಾಗವಹಿಸಿದ್ದಾರೆ.
ಸಾಂಸ್ಕೃತಿ ಬಾಂಧವ್ಯವನ್ನು ಬಲಪಡಿಸುವ ಮತ್ತು ಉಭಯ ದೇಶಗಳ ನಡುವಿನ ನಿರಂತರ ಸ್ನೇಹವನ್ನು ಆಚರಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.  ಈ ಭೋಜನಕ್ಕೆ 400ಕ್ಕೂ ಹೆಚ್ಚು ಅತಿಥಿಗಳಿಗೆ ವೈಟ್​​ಹೌಸ್ ಆಹ್ವಾನವನ್ನು ನೀಡಲಾಗಿತ್ತು.
ಶ್ವೇತಭವನದಲ್ಲಿ ಬಿಡನ್ ಆಯೋಜಿಸಿದ್ದ ಪ್ರಧಾನಿ ಮೋದಿ ಅವರ ಜತೆಗೆ ವಿಶೇಷ ಅತಿಥಿಗಳಾಗಿ ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ-ನೀತಾ ಅಂಬಾನಿ, ಗೂಗಲ್​​ ಮುಖ್ಯಸ್ಥ ಸುಂದರ್​​ ಪಿಚೈ ಹಾಗೂ ಅವರ ಪತ್ನಿ ಅಂಜಲಿ ಪಿಚೈ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು.
ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಗಾಗಿ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಮತ್ತು ಪ್ರಥಮ ಮಹಿಳೆ ಜಿಲ್ ಬಿಡೆನ್ ವಿಶೇಷವಾಗಿ  ಸಸ್ಯಾಹಾರಿ ಮೆನುವನ್ನು ಸಿದ್ಧಪಡಿಸಿದ್ದರು.
ಪ್ರಧಾನಿ ಮೋದಿಗಾಗಿ ಏರ್ಪಡಿಸಿದ್ದ ಔತಣಕೂಟದಲ್ಲಿ ಉದ್ಯಮಿಗಳೂ ಸೇರಿದಂತೆ 400 ಅತಿಥಿಗಳು ಭಾಗಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + eight =
Remember me
