ಮಹಾರಾಷ್ಟ್ರ:ಕ್ರೂರಿ ತಂದೆ ತನ್ನ ಅಪ್ರಾಪ್ತ ಮಗಳ ಮೇಲೆಯೇ ನಾಲ್ಕು ವರ್ಷಗಳ ಕಾಲ ನಿರಂತರ ಅತ್ಯಾಚಾರ ಎಸಗಿದ್ದು, ಬಾಲಕಿ ಈಗ ಗರ್ಭಿಣಿಯಾಗಿರುವ ಹೇಯ ಕೃತ್ಯ ಮುಂಬೈನಲ್ಲಿ ನಡೆದಿದೆ. ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:Viral Video: ಚಟಕ್ಕೆ ಹೋಗುತ್ತಿದ್ದರೂ ಚಟ ಬಿಡಲಿಲ್ಲ: ಐಸಿಯುನಲ್ಲಿ ತಂಬಾಕು ತಿಕ್ಕಿದ ಭೂಪ! ವಿಡಿಯೋ ವೈರಲ್​
ಸಂತ್ರಸ್ತೆಯ ಹೇಳಿಕೆಯ ಪ್ರಕಾರ, 2020 ಮತ್ತು 2023ರ ನಡುವೆ ತನ್ನ ತಾಯಿ ಕೆಲಸಕ್ಕಾಗಿ ಹೊರಗಡೆ ಹೋದಾಗ ತನ್ನ ತಂದೆ ತನ್ನ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ ಎಂದು ಸಂತ್ರಸ್ತೆ ಹೇಳಿದ್ದಾಳೆ. ಸಂತ್ರಸ್ತೆ ವೈದ್ಯರನ್ನು ಭೇಟಿ ಮಾಡಿದ ಬಳಿಕ ಆಕೆ 5 ತಿಂಗಳ ಗರ್ಭಿಣಿ ಎಂದು ವೈದ್ಯರು ತಿಳಿಸಿದ್ದಾರೆ.
ಈ ಸಂಬಂಧ ಬಾಲಕಿ ಮತ್ತು ತಾಯಿ, ಪಾಪಿ ತಂದೆ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ವಿರುದ್ಧ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಮತ್ತು ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲು ಮಾಡಲಾಗಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.ದೇಶದಲ್ಲಿ ಹೆಚ್ಚಾದ ಪೋಕ್ಸೋ ಪ್ರಕರಣಗಳು:ಇತ್ತೀಚೆಗೆ ಕೇರಳದ ತಿರುವನಂತಪುರಂನಲ್ಲಿ ತನ್ನ ಅಪ್ರಾಪ್ತ ಮಗಳ ಮೇಲೆ ಪದೇ ಪದೇ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿ ಮಾಡಿದ್ದ ವ್ಯಕ್ತಿಗೆ ಕೇರಳ ನ್ಯಾಯಾಲಯ 3 ಜೀವಾವಧಿ ಶಿಕ್ಷೆ ವಿಧಿಸಿತ್ತು.
ಮಂಜೇರಿ ಫಾಸ್ಟ್ ಟ್ರ‍್ಯಾಕ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಜೇಶ್ ಕೆ ವ್ಯಕ್ತಿಯನ್ನು ದೋಷಿಯೆಂದು ಪ್ರಕಟಿಸಿ. ಐಪಿಸಿ ಸೆಕ್ಷನ್ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಮತ್ತು ಪೋಕ್ಸೋ  ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಈ ಎಲ್ಲಾ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್ 3 ಜೀವಾವಾಧಿ ಶಿಕ್ಷೆಯ ಜೊತೆಗೆ 6.6 ಲಕ್ಷ ರೂ. ದಂಡವನ್ನು ವಿಧಿಸಿತ್ತು.

Viral Video: ಚಟಕ್ಕೆ ಹೋಗುತ್ತಿದ್ದರೂ ಚಟ ಬಿಡಲಿಲ್ಲ: ಐಸಿಯುನಲ್ಲಿ ತಂಬಾಕು ತಿಕ್ಕಿದ ಭೂಪ! ವಿಡಿಯೋ ವೈರಲ್​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
