ಮುಂಬೈ:ಅತಿ ದೊಡ್ಡ ಮಾದಕ ವಸ್ತು ಕಳ್ಳಸಾಗಣೆ ಪ್ರಕರಣವೊಂದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಕಿಗೆ ಬಂದಿದ್ದು, ಉಗಾಂಡ ಮೂಲದ ಮಹಿಳೆಯೊಬ್ಬರು ತಮ್ಮ ವಿಗ್​ ಹಾಗೂ ಒಳಉಡುಪಿನಲ್ಲಿ 8 ಕೋಟಿ ಮೌಲ್ಯದ ಡ್ರಗ್ಸ್​ ಕಳ್ಳಸಾಗಾಣೆ ಮಾಡಿ ಸಿಕ್ಕಿಬಿದ್ದಿದ್ದಾರೆ.
ಡಿಸೆಂಬರ್​ 19ರಂದು ಮುಂಬೈ ವಿಮಾನ ನಿಲ್ದಾಣದಲ್ಲಿ ಡಿಆರ್​ಐ ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 890 ಗ್ರಾಂ ಕೊಕೇನ್ಅನ್ನು ವಶಕ್ಕೆ ಪಡೆಯಲಾಗಿದ್ದು, ಇದರ ಒಟ್ಟು ಮೌಲ್ಯ 8.9 ಕೋಟಿ ರೂಪಾಯಿ ಎಂದು ತಿಳಿದು ಬಂದಿದೆ. NDPS ಕಾಯ್ದೆ 1985ರ ಅಡಿಯಲ್ಲಿ ಮಹಿಳೆಯನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
#WATCH| DRI Officers Bust Narcotics Smuggling Attempt By Ugandan Woman Who Hid Drugs Inside Hair Wig & Innerwear Worn By HerBy:@s_somen#Mumbai#DRI#Drugs#Narcotics#Smuggle#Crimepic.twitter.com/r0yQ9nSRcb
ಇದನ್ನೂ ಓದಿ:ಐಪಿಎಲ್​ನಲ್ಲಿ ಆಡುವ ಬಗ್ಗೆ ನಿರೀಕ್ಷೆ ಮೂಡಿಸಿದ ಪಂತ್; ಒಮ್ಮೆ ಈ ವಿಡಿಯೋ ನೋಡಿ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಅಧಿಕಾರಿಯೊಬ್ಬರು, ವಿದೇಶದಿಂದ ಅಕ್ರಮವಾಗಿ ಡ್ರಗ್ಸ್​​ ಕಳ್ಳಸಾಗಾಣೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮಹಿಳೆಯನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಆಕೆಯ ವಿಗ್​ ಹಾಗೂ ಒಳಉಡುಪಿನಲ್ಲಿ ಡ್ರಗ್ಸ್​​ ಸಾಗಿಸುತ್ತಿರುವುದು ಕಂಡು ಬಂದಿದೆ. ಕೂಡಲೇ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅದರ ಒಟ್ಟು ಮೌಲ್ಯ 8.9 ಕೋಟಿ ರೂಪಾಯಿ ಎಂದು ತಿಳಿದು ಬಂದಿದೆ.
NDPS ಕಾಯ್ದೆ 1985ರ ಅಡಿಯಲ್ಲಿ ಆಕೆಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಿಚಾರಣೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:18 + eight =
Remember me
