ಮುಂಬೈ:ಗೀಸರ್‌ನಿಂದ ಗ್ಯಾಸ್ ಸೋರಿಕೆಯಾಗುವ ಬಗ್ಗೆ ನಾವು ಈ ಹಿಂದೆಯೇ ಕೇಳಿದ್ದೇವೆ. ಗೀಸರ್ ಗ್ಯಾಸ್ ಸೋರಿಕೆಯಿಂದ ನವವಿವಾಹಿತರು ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ದೀಪಕ್ ಷಾ ಮತ್ತು ಟೀನಾ ಶಾ ಮೃತರು. ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಬಾತ್‌ರೂಮ್‌ನಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ನವ ವಿವಾಹಿತರ ಶವ ಪತ್ತೆಯಾಗಿದೆ. ಹೋಳಿ ಹಬ್ಬದ ಬಳಿಕ ಸ್ನಾನಕ್ಕೆಂದು ತೆರಳಿದ ಇಬ್ಬರು ಗ್ಯಾಸ್ ಸೋರಿಕೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:VIDEO | ಬಸ್‌ ಸೀಟಿಗಾಗಿ ಜುಟ್ಟು ಹಿಡಿದು ಹೊಡೆದಾಡಿದ ಮಹಿಳೆಯರು!
ಪೊಲೀಸರ ಪ್ರಕಾರ, ದಂಪತಿ ಬಾಡಿಗೆಗೆ ಮನೆಯಲ್ಲಿ ವಾಸಿಸುತ್ತಿದ್ದರು. ಹೋಳಿ ಹಬ್ಬದ ಬಳಿಕ ಸ್ನಾನಕ್ಕೆಂದು ಗೀಸರ್ ಆನ್ ಮಾಡಿದ್ದರು. ಮನೆಯ ಬಾತ್ ರೂಮ್​​ನಲ್ಲಿದ್ದ ಗೀಸರ್ ನಿಂದ ಗ್ಯಾಸ್ ಸೋರಿಕೆಯಾಗಿ ಇಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಶಾ ಅವರ ಮನೆಗೆ ಕೆಲಸಕ್ಕೆ ಬರುತ್ತಿದ್ದ ಮಹಿಳೆಯೊಬ್ಬರು ಕಾಲಿಂಗ್‌ಬೆಲ್‌ ಬಾರಿಸಿದರೂ ಯಾರೂ ಬಾಗಿಲು ತೆರೆಯಲಿಲ್ಲ. ನಂತರ ಈ ಮಾಹಿತಿಯನ್ನು ಪೊಲೀಸರಿಗೆ ನೀಡಲಾಯಿತು. ಪೊಲೀಸರು ಡುಪ್ಲಿಕೇಟ್ ಕೀಲಿಯಿಂದ ಬಾಗಿಲು ತೆರೆದಾಗ ಬಾತ್ ರೂಮ್‌ನಲ್ಲಿ ದಂಪತಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಈ ಪ್ರಕರಣದಲ್ಲಿ ಆಕಸ್ಮಿಕ ಸಾವು ದಾಖಲಿಸಿಕೊಂಡಿದ್ದಾರೆ. ಈ ಎರಡೂ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
VIDEO | ಬಸ್‌ ಸೀಟಿಗಾಗಿ ಜುಟ್ಟು ಹಿಡಿದು ಹೊಡೆದಾಡಿದ ಮಹಿಳೆಯರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 3 =
Remember me
