ಮುಂಬೈ: ಮೊಬೈಲ್ ಕೊಡಲು ನಿರಾಕರಿಸಿದ ವ್ಯಕ್ತಿಯೋರ್ವನ ಮೇಲೆ ತಲ್ವಾರ್​ನಿಂದ ಹಲ್ಲೆ ನಡೆಸಿರುವ ಭೀಕರ ಘಟನೆ ಮುಂಬೈನ ಧಾರಾವಿಯಲ್ಲಿ ಬುಧವಾರ ನಡೆದಿದೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಘಟನೆಯಲ್ಲಿ ಯುವಕರ ಗುಂಪು ಜನನಿಬಿಡ ಪ್ರದೇಶದಲ್ಲಿ ತಲ್ವಾರ್​ನಿಂದ ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ.
ಇದನ್ನೂ ಓದಿ:ಆಂಧ್ರದಲ್ಲಿ ಆಹಾರಕ್ಕೆ ಹಾಹಾಕಾರ..ಹೆಲಿಕಾಪ್ಟರ್​ನಿಂದ ಬಿದ್ದ ಕೆಸರಿನಲ್ಲಿ ಬಿದ್ದ ಪೊಟ್ಟಣಗಳಿಗಾಗಿ ನೂಕುನುಗ್ಗಲು!
ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಮಂಗಳವಾರ ಘಟನೆ ನಡೆದಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ದಾರಿಯಲ್ಲಿ ಸಾಗುತ್ತಿದ್ದ ಯುವಕನನ್ನು ತಡೆದ ಮತ್ತೊಬ್ಬ ಯುವಕ ಮೊಬೈಲ್​ ಕೊಡುವಂತೆ ಒತ್ತಾಯಿಸಿದ್ದಾನೆ. ಆಗ ಯುವಕ ಮೊಬೈಲ್​ ನೀಡಲು ನಿರಾಕರಿಸಿದ್ದು, ನಂತರ ಯುವಕನ ಮೇಲೆ ತಲ್ವಾರ್​ನಿಂದ ಹಲ್ಲೆ ನಡೆಸುತ್ತಿರುವುದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಿದ ವೀಡಿಯೋದಲ್ಲಿ ಕಾಣಬಹುದಾಗಿದೆ. ನಂತರ ಹಲ್ಲೆ ನಡೆಸಿದ ಯುವಕನನ್ನು ನಿಯಂತ್ರಿಸಲು ಮತ್ತಿಬ್ಬರು ಯತ್ನಿಸುತ್ತಾರೆ.
ಘಟನೆ ಸಂಬಂಧ ಅಪ್ರಾಪ್ತ ಬಾಲಕ ಸೇರಿದಂತೆನಾಲ್ವರನ್ನು ಬಂಧಿಸಲಾಗಿದೆ. ದಾಳಿಗೆ ಒಳಗಾದ ಯುವಕನ ಹೆಸರು, ವಿಳಾಸ ಇನ್ನಷ್ಟೇ ತಿಳಿದು ಬರಬೇಕಿದೆ.
ಒಂದು ದಿನದ ಹಿಂದಷ್ಟೇ ಮುಂಬೈನ ಗೋವಂಡಿಯಲ್ಲಿ ಜನನಿಬಿಡ ರಸ್ತೆಯಲ್ಲಿ ಯುವಕರ ಗೊಂಪೊಂದು ಕತ್ತಿಯಿಂದ ದಾಳಿ ಮಾಡಿದ್ದರಿಂದ 17 ವರ್ಷದ ಬಾಲಕ ಮೃತಪಟ್ಟಿದ್ದ.
ಅತ್ಯಾಚಾರ ಆರೋಪಿಗೆ ನಿರೀಕ್ಷಣಾ ಜಾಮೀನು: ನ್ಯಾಯಾಲಯ ಕೊಟ್ಟ ಕಾರಣ ಹೀಗಿದೆ ನೋಡಿ..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × four =
Remember me
