ಮುಂಬೈ:ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೇ 10 ರಂದು 6 ಗಂಟೆಗಳ ಕಾಲ ಯಾವುದೇ ವಿಮಾನ ಹಾರಾಟ ನಡೆಸುವುದಿಲ್ಲ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೇನು ಮುಂಗಾರು ಮಳೆ ಪ್ರಾರಂಭವಾಗಲಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನ ಹಾರಾಟಕ್ಕೆ ಯಾವುದೇ ಅಡೆತಡೆ ಉಂಟಾಗದಿರಲು ರನ್​ವೇ ನಿರ್ವಹಣಾ ಕಾರ್ಯ ನಡೆಯುವುದರಿಂದ ಈ ನಿರ್ಧಾರ ಕೈಗೊಂಡಿದೆ.
ಹಾಗಾಗಿ ಮೇ 10 ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಯಾವುದೇ ವಿಮಾನ ಹಾರಾಟ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ಈಗಾಗಲೇ ಮಾಹಿತಿ ನೀಡಲಾಗಿದ್ದು, ಎರಡು ರನ್​ ವೇಗಳ ನಿರ್ವಹಣಾ ಕಾರ್ಯ ಅಂದು ಸಂಜೆ 5 ಗಂಟೆಯೊಳಗೆ ಪೂರ್ಣಗೊಂಡ ನಂತರ ವಿಮಾನ ಹಾರಾಟ ಕಾರ್ಯಾರಂಭಿಸಲಿದೆ. ಯಾವುದೇ ಅನಾನುಕೂಲವನ್ನು ತಪ್ಪಿಸಲು ಪ್ರಯಾಣಿಕರು ಆಯಾ ವಿಮಾನಯಾನ ಸಂಸ್ಥೆಗಳೊಂದಿಗೆ ಪರಿಶೀಲಿಸಿಕೊಳ್ಳಬೇಕು ಎಂದು ತಿಳಿಸಿದೆ.
ನೂರಾರು ಮನೆಗಳನ್ನು ಹೊತ್ತೊಯ್ದ ಸುಂಟರಗಾಳಿ: ಭೀಕರ ವಿಡಿಯೋ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 3 =
Remember me
