ಮಹಾರಾಷ್ಟ್ರ:ಮಾಡೆಲ್​ಗಳನ್ನು ಸೆಕ್ಸ್ ರಾಕೆಟ್ ದಂಧೆಯಲ್ಲಿ ಬಳಸಿಕೊಳ್ಳುತ್ತಿದ್ದ ಆರೋಪದ ಮೇಲೆ ಭೋಜ್​ಪುರಿ ನಟಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಸುಮನ್ ಕುಮಾರಿ(24) ಬಂಧಿತ ನಟಿ. ಪೊಲೀಸರ ಸಾಮಾಜಿಕ ಸೇವೆಗಳ ಬ್ರ್ಯಾಂಚ್(social services branch) ಕಾರ್ಯಾಚರಣೆ ನಡೆಸಿ ವೇಶ್ಯವಾಟಿಕೆ ದಂಧೆಯನ್ನು ಬಯಲಿಗೆಳೆದಿದ್ದಾರೆ.
ಇದನ್ನೂ ಓದಿ:‘ಮಳೆಯಲ್ಲಿ ಸಾಂಗ್​ ಶೂಟಿಂಗ್​ ವೇಳೆ ಒಳ ಉಡುಪು ಧರಿಸಿರಲಿಲ್ಲ: ಮೇಲಕ್ಕೆತ್ತಿದಾಗ ರಜನಿ ಸರ್ ಗಲಿಬಿಲಿಗೊಂಡಿದ್ದರು’
ಆರೆ ಕಾಲೋನಿ ಪ್ರದೇಶದಲ್ಲಿರುವ ರಾಯಲ್ ಪಾಮ್ ಹೋಟೆಲ್​ನಲ್ಲಿ ವೇಶ್ಯವಾಟಿಕೆ ದಂಧೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ದಂಧೆ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು, ಸುಮನ್ ಕುಮಾರಿ ಎಂಬ ಹೆಸರಿನಲ್ಲಿ ನಕಲಿ ಗ್ರಾಹಕಿಯೊಬ್ಬರನ್ನು ಹೊಟೇಲ್​ಗೆ ಕಳುಹಿಸಿದ್ದಾರೆ. ಈ ವೇಳೆ ನಟಿ ಮಾಂಸದಂಧೆಯಲ್ಲಿ ತೊಡಗಿಸಿಕೊಂಡಿರುವುದು ಪೊಲೀಸರಿಗೆ ಖಚಿತವಾಗಿದೆ. ಪ್ರತಿ ಮಾಡೆಲ್​ಗಳಿಗೆ 50,000 ರಿಂದ 80,000 ರೂಪಾಯಿ ಬೆಲೆಗೆ ಮಾತುಕತೆ ನಡೆಸುತ್ತಿದ್ದಾಗ ಪೊಲೀಸರು ದಾಳಿ ಮಾಡಿ ನಟಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ನಟಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ. ವೇಶ್ಯವಾಟಿಕೆ ದಂಧೆಯಲ್ಲಿ ಯಾರೆಲ್ಲ ತೊಡಗಿಸಿಕೊಂಡಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಸಾರ್ವಜನಿಕರಿಗೆ ಇಂತಹ ದಂಧೆಗಳ ಬಗ್ಗೆ ಮಾಹಿತಿ ಕಂಡು ಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಕಾಮತೃಷೆ ತೀರಿಸಿಕೊಳ್ಳಲು ವಿದ್ಯಾರ್ಥಿಗಳ ಬಳಕೆ: 6 ಶಿಕ್ಷಕಿಯರ ಬಂಧನ, ಸ್ಫೋಟಕ ಮಾಹಿತಿ ಬಹಿರಂಗ
ಭೋಜ್‌ಪುರಿ ನಟಿ ಸುಮನ್ ಕುಮಾರಿ, ಗ್ರಾಹಕರಿಗೆ ಮಾಡೆಲ್‌ಗಳನ್ನು ಸರಬರಾಜು ಮಾಡುತ್ತಿದ್ದರು. ಸಿನಿಮಾ ನಟಿಯಾಗಬೇಕೆಂಬ ಕನಸು ಕಟ್ಟಿಕೊಂಡು ಮುಂಬೈಗೆ ಬಂದ ಹುಡುಗಿಯರಿಗೆ ಹಣದ ಆಮೀಷವೊಡ್ಡಿ ವೇಶ್ಯಾವಾಟಿಕೆ ದಂಧೆಗೆ ಬಳಸಿಕೊಳ್ಳುತ್ತಿದ್ದರು. ಬಂಧಿತ ನಟಿ ಸುಮನ್, ಮಾಡೆಲ್​ಗಳನ್ನು ಸಂಪರ್ಕಿಸುವ ಕೆಲಸ ಮಾಡುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಸೆಕ್ಸ್ ರಾಕೆಟ್ ದಂಧೆಯಲ್ಲಿ ಬಂಧಿತ ನಟಿ ಸುಮನ್ ಕುಮಾರಿ, ಅನೇಕ ಭೋಜ್‌ಪುರಿ ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಲೈಲಾ ಮಜ್ನು ಸೇರಿದಂತೆ ಬಾಪ್ ನಂಬರಿ ಬೇಟಾ ದಸ್ ನಂಬ್ರಿಯಂತಹ ಭೋಜ್‌ಪುರಿ ಹಾಸ್ಯ ಕಾರ್ಯಕ್ರಮ ಮಾಡಿದ್ದಾರೆ.(ಏಜೆನ್ಸೀಸ್)
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:5 × 5 =
Remember me
