ಮುಂಬೈ:ಉದ್ಯಮಿ ಮುಕೇಶ್ ಅಂಬಾನಿ ಮನೆ ಸಮೀಪ ಸ್ಪೋಟಕಗಳಿದ್ದ ವಾಹನ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಮುಂಬೈನ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಹೇಮಂತ್ ನಾಗ್ರಾಳೆ ಹೊಸ ಆಯುಕ್ತರಾಗಿ ಬುಧವಾರ ನೇಮಕವಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಅಧಿಕಾರಿ ಸಚಿನ್ ವಜೆ ಬಂಧನವಾದ ಕೆಲ ದಿನಗಳ ಬಳಿಕ ಈ ಬೆಳವಣಿಗೆ ನಡೆದಿದೆ. ಈ ಪ್ರಕರಣದಲ್ಲಿ ಉದ್ಧವ್ ಠಾಕ್ರೆ ಸರ್ಕಾರ ಭಾರಿ ಮುಖಭಂಗ ಅನುಭವಿಸಿದೆ. ಪೊಲೀಸ್ ಅಧಿಕಾರಿಯೇ ಪ್ರಕರಣದಲ್ಲಿ ಶಾಮೀಲಾಗಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ. ಈಗ ಮುಜುಗರದಿಂದ ತಪ್ಪಿಸಿಕೊಳ್ಳಲು ಮುಂಬೈ ಪೊಲೀಸ್ ಆಯುಕ್ತರನ್ನು ಸರ್ಕಾರ ವರ್ಗಾವಣೆ ಮಾಡಿದೆ ಎನ್ನಲಾಗುತ್ತಿದೆ.
ಸಚಿನ್ ವಜೆ ಕೈವಾಡ: ಸ್ಪೋಟಕವಿದ್ದ ವಾಹನಕ್ಕೆ ಪೊಲೀಸ್ ಅಧಿಕಾರಿ ಸಚಿನ್ ವಜೆ ಅವರೇ ಬೆಂಗಾವಲಾಗಿ ಬೇರೊಂದು ವಾಹನ ಚಲಾಯಿಸಿಕೊಂಡು ಬಂದಿದ್ದರು ಎಂದು ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಅಧಿಕಾರಿಗಳು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಕಪ್ಪು ಮರ್ಸಿಡಿಸ್ ಬೆಂಜ್ ಕಾರೊಂದನ್ನು ಎನ್​ಐಎ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. ಸ್ಪೋಟಕ ಪತ್ತೆ ಪ್ರಕರಣದ ಹಿಂದೆ ವಜೆ ಕೈವಾಡವಿದೆ. ಪ್ರಚಾರದ ಮುನ್ನೆಲೆಗೆ ಬರುವುದು ಅವರ ಗುರಿಯಾಗಿತ್ತು ಎಂದು ಎನ್​ಐಎ ಹೇಳಿದೆ. ವಶಪಡಿಸಿಕೊಂಡ ಕಾರಿನಿಂದ 5 ಲಕ್ಷ ರೂ. ನಗದು, ನೋಟು ಎಣಿಕೆ ಯಂತ್ರ, ಬಟ್ಟೆಗಳು ಮತ್ತು ಸ್ಕಾರ್ಪಿಯೋ ಕಾರಿನ ಲೈಸೆನ್ಸ್ ಪ್ಲೇಟ್ ವಶಪಡಿಸಿಕೊಳ್ಳಲಾಗಿದೆ.
ಯುವತಿ ಮೆಸೇಜ್​ನಲ್ಲಿ ಸೆಕ್ಸ್​ಗೆ ಅನುಮತಿ ನೀಡಿದ ಮಾತ್ರಕ್ಕೆ ಲೈಂಗಿಕ ಕ್ರಿಯೆ ನಡೆಸುವಂತಿಲ್ಲ ಎಂದ ಹೈಕೋರ್ಟ್​

ಆಕಾಶದಲ್ಲಿಯೇ ಹುಟ್ಟಿತು ಹೆಣ್ಣುಮಗು: ಬೆಂಗಳೂರಿನ ಯುವತಿಗೆ ಖರ್ಚಿಲ್ಲದೇ ನೆರವೇರಿತು ಹೆರಿಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − seven =
Remember me
