ತಿರುವನಂತಪುರಂ:ಕೃಷಿ ಭೂಮಿಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿದೆ. ಅದರಲ್ಲೂ ಕಾಡು ಹಂದಿಗಳಿಂದ ತಮ್ಮ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ಒಂದಿಲ್ಲೊಂದು ಉಪಾಯ ಹೂಡುತ್ತಿರುತ್ತಾರೆ. ಇದೀಗ ಕೇರಳದ ಕಣಿಯಂ ಪೊಯಿಲೂರು ಭಾಗದ ರೈತರಿಗೆ ಸಮಸ್ಯೆಯಾಗಿದ್ದ ಕಾಡು ಹಂದಿಗಳನ್ನು ಗುಂಡಿಕ್ಕಿ ಕೊಲ್ಲಲಾಗಿದೆ.
ಈ ಘಟನೆ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಡೆದಿದೆ. ಈ ಭಾಗದಲ್ಲಿ ಕಾಡು ಹಂದಿಗಳ ಉಪಟಳ ಹೆಚ್ಚಾಗಿದ್ದು, ರೈತರ ಅಪಾರ ಪ್ರಮಾಣದ ಕೃಷಿ ಭೂಮಿ ಹಾಳಾಗುತ್ತಿತ್ತು. ಈ ಬಗ್ಗೆ ರೈತರು ಕಾಡು ಹಂದಿಗಳ ಸಮಸ್ಯೆ ಬಗೆ ಹರಿಸುವಂತೆ ನಗರಸಭೆಗೆ ದೂರು ನೀಡಿದ್ದರು.ರೈತರ ಮನವಿಗೆ ಸ್ಪಂದಿಸಿದ ನಗರಸಭೆ 8 ಜನ ಶೂಟರ್ ಹಾಗೂ 2 ಜನ ಸಹಾಯಕರನ್ನು ಒಳಗೊಂಡ ವಿಶೇಷ ತಂಡ ರಚಿಸಿದೆ. ನಂತರ ನಡೆದ 12 ಗಂಟೆಗಳ ಕಾರ್ಯಾಚರಣೆಯಲ್ಲಿ 42 ಕಾಡು ಹಂದಿಗಳಿಗೆ ಗುಂಡಿಕ್ಕಲಾಗಿದೆ. ಅರಣ್ಯ ಇಲಾಖೆಯ ಅನುಮತಿ ಪಡೆದು, ಪರವಾನಗಿ ಇರುವ ಬಂದೂಕು ಬಳಸಿ ಈ ಕಾರ್ಯಾಚರಣೆ ಮಾಡಲಾಗಿದೆ ಎಂದು ವರದಿಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 2 =
Remember me
