ಜಾರ್ಖಾಂಡ್:ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ ಪಕ್ಷ ಐತಿಹಾಸಿಕ ಗೆಲುವಿನಿಂದ ಹರ್ಷಗೊಂಡಿರುವ ಮುಸ್ಲಿಂ ಕಾಂಗ್ರೆಸ್ ಶಾಸಕ ಇರ್ಫಾನ್ ಅನ್ಸಾರಿ ಅವರು ತಮ್ಮ ವಿಧಾನಸಭಾ ಕ್ಷೇತ್ರವಾದ ಜಮ್ತಾರಾದಲ್ಲಿ ದೇಶದ ಅತಿದೊಡ್ಡ ಹನುಮಾನ್ ಮಂದಿರವನ್ನು ನಿರ್ಮಿಸುವುದಾಗಿ ಘೋಷಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಶಾಸಕ ಇರ್ಫಾನ್ ಅನ್ಸಾರಿಯವರು ತಮ್ಮ ವಿಧಾನಸಭಾ ಕ್ಷೇತ್ರವಾದ ಜಮ್ತಾರಾದಲ್ಲಿ ದೇಶದ ಅತಿದೊಡ್ಡ ಹನುಮಾನ್ ಮಂದಿರವನ್ನು ನಿರ್ಮಿಸುವುದಾಗಿ ಹೇಳಿಕೊಂಡಿದ್ದಾರೆ.
” ನಾನು ಮೊದಲಿನಿಂದಲೂ ಹನುಮಂತನ ಅನುಯಾಯಿಯಾಗಿದ್ದರೂ, ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಐತಿಹಾಸಿಕ ವಿಜಯದ ನಂತರ, ಹನುಮಂತನ ಮೇಲಿನ ನನ್ನ ನಂಬಿಕೆ ಮತ್ತಷ್ಟು ಹೆಚ್ಚಿದೆ. ಹನುಮಂತ ಎಲ್ಲರಿಗೂ ಸೇರಿದವನು. ಪಕ್ಷದ ಗೆಲುವು ಬಳಿಕ ಹನುಮಂತನ ದೇವಸ್ಥಾನಕ್ಕೆ ತೆರಳಿದೆ” ಎಂದು ಅನ್ಸಾರಿಯವರು ಹೇಳಿದ್ದಾರೆ.
ಇದೇ ವೇಳೆ ದೇವಸ್ಥಾನ ನಿರ್ಮಾಣಕ್ಕೆ ಹಣ ಹೊಂದಿಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ನನ್ನ ಕಿಡ್ನಿ ಮಾರಿಯಾದರೂ ದೇವಸ್ಥಾನ ನಿರ್ಮಾಣ ಮಾಡುತ್ತೇನೆ. ಈಗಾಗಲೇ ದೇವಸ್ಥಾನ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದೆ. ಶೀಘ್ರದಲ್ಲಿಯೇ ನಿರ್ಮಾಣ ಕಾರ್ಯ ಆರಂಭವಾಗಲಿದೆ” ಎಂದಿದ್ದಾರೆ.
ರಾಜ್ಯದಲ್ಲಿ ಕುಸಿದಿದ್ದ ತಾಪಮಾನ ದಿಢೀರ್ ಹೆಚ್ಚಳ; ಬಿಸಿಲಿನ ಬೇಗೆಗೆ ಜನ ಹೈರಾಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
