ಪಟನಾ:ಬಿಹಾರ ವಿಧಾನಸಭಾ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದಿದೆ. ಎನ್​ಡಿಎ ಸರ್ಕಾರ ನಿತೀಶ್​ ಕುಮಾರ್​ ಅವರನ್ನು ಮುಖ್ಯಮಂತ್ರಿಯಾಗಿ ಘೋಷಿಸಿದ್ದು, ಸಚಿವ ಸಂಪುಟವನ್ನೂ ರಚಿಸಿದೆ. ರಾಜ್ಯದಲ್ಲಿ ಸೋಮವಾರ ಮತ್ತು ಮಂಗಳವಾರ ಶಾಸಕರ ಪ್ರಮಾಣ ವಚನ ಕಾರ್ಯಕ್ರಮ ನಡೆಯುತ್ತಿದೆ. ಈ ಸಮಯದಲ್ಲಿ ಮುಸ್ಲಿಂ ಶಾಸಕರೊಬ್ಬರು ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ಎಲ್ಲರ ಹುಬ್ಬೇರುವಂತಾಗಿದೆ.
ಇದನ್ನೂ ಓದಿ:ಕಾಂಗ್ರೆಸ್​ಗೆ ಬಂತು ಸಂಕಷ್ಟ; 25 ಸಾವಿರ ಕೋಟಿ ರೂ. ಭೂ ಹಗರಣ ಪ್ರಕರಣದಲ್ಲಿ ಕೈ ನಾಯಕರ ಹೆಸರು
ಕಾಂಗ್ರೆಸ್​ ಶಾಸಕ ಶಕೀಲ್​ ಅಹಮ್ಮದ್​ ಖಾನ್​ ಅವರು ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿರುವ ಶಾಸಕ. ಇವರು ಜವಹರಲಾಲ್​ ನೆಹರು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿ ಕೂಡ ಹೌದು. ಸಂಸ್ಕೃತವನ್ನು ತಮ್ಮ ಭಾಷೆ ಎಂದುಕೊಂಡಿರುವ ಬಿಜೆಪಿ, ಹಾಗೂ ಅದೊಂದು ಪರ ಭಾಷೆ ಎಂದು ದೂರುವ ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹದುಲ್ ಮುಸ್ಲೀಮೀನ್ (ಎಐಎಂಐಎಂ) ಪಕ್ಷಕ್ಕೆ ಒಂದು ಖಡಕ್​ ಉತ್ತರ ಕೊಡುವ ಸಲುವಾಗಿ ತಾವು ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾಗಿ ಅವರು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ:ಸಾಲ ವಾಪಾಸು ಕೇಳಲು ಬಂದವಳನ್ನೇ ರೇಪ್​ ಮಾಡಿಬಿಟ್ಟ; ಸಾಲ ಕೇಳಿದರೆ ಹುಷಾರ್​!
ಶಾಸಕರ ಪ್ರಮಾಣ ವಚನ ಕಾರ್ಯಕ್ರಮ ವಿವಿಧತೆಯಲ್ಲಿ ಏಕತೆ ಸಾರುವಂತಿತ್ತು. ಮೈಥಿಲಿ, ಉರ್ದು, ಹಿಂದಿ, ಸಂಸ್ಕೃತ ಮತ್ತು ಇಂಗ್ಲಿಷ್​ ಭಾಷೆಗಳಲ್ಲಿ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. (ಏಜೆನ್ಸೀಸ್​)
2 ಸಾವಿರ ವರ್ಷಗಳ ಹಿಂದೆ ಜ್ವಾಲಾಮುಖಿಗೆ ಬಲಿಯಾಗಿದ್ದರ ದೇಹ ಪತ್ತೆ; ಶ್ರೀಮಂತ, ಬಡವನ ಜೋಡಿ ಎಂದ ತಜ್ಞರು

ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್​ ಗೊಗೊಯ್​ ಇನ್ನಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − twelve =
Remember me
