ಫೈರೋಜಾಬಾದ್‌: ಕೋಟ್ಯಂತರ ಜನರು ಕಾತುರದಿಂದ ಕಾಯುತ್ತಿದ್ದ ದಿನ ಇಂದು (ಜನವರಿ 22) ನೆರವೇರಿದ್ದು, ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ಸಂಪನ್ನಗೊಂಡಿದೆ. ದೇಶಾದ್ಯಂತ ಸಂಭ್ರಮ ಮನೆ ಮಾಡಿದ್ದು, ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಸಿಹಿ ಹಂಚಿ ಸಂಭ್ರಮಿಸಲಾಗಿದೆ.
ಇದನ್ನೂ ಓದಿ:ಪ್ರಭಾಸ್ ‘ಕಲ್ಕಿ 2898 AD’ ಚಿತ್ರದಲ್ಲಿ ನಟಿಸಲಿದ್ದಾರೆ ಮಲಯಾಳಂ ಸ್ಟಾರ್ ನಟಿ!
ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ದಿನವೇ ಹುಟ್ಟಿದ ಮಗುವಿಗೆ ಇಲ್ಲಿನ ಮುಸ್ಲಿಂ ಸಮುದಾಯದ ಮಹಿಳೆಯೊಬ್ಬರು ರಾಮ್ ರಹೀಂ ಎಂದು ಹೆಸರಿಡುವ ಮೂಲಕ ಹಿಂದೂ–ಮುಸ್ಲಿಂ ಭಾವೈಕ್ಯತೆಯ ಸಂದೇಶ ನೀಡಿದ್ದಾರೆ.
ಫರ್ಜಾನಾ ಎಂಬ ಮಹಿಳೆ ಸೋಮವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಮತ್ತು ತಾಯಿ ಇಬ್ಬರೂ ಚೆನ್ನಾಗಿದ್ದಾರೆ ಎಂದು ಜಿಲ್ಲಾ ಮಹಿಳಾ ಆಸ್ಪತ್ರೆಯ ಪ್ರಭಾರಿ ಡಾ.ನವೀನ್ ಜೈನ್ ಹೇಳಿದರು.
ಮಗುವಿನ ಅಜ್ಜಿ ಹುಸ್ನಾ ಬಾನು ಮಗುವಿಗೆ ರಾಮ್‌ ರಹೀಂ ಎಂದು ನಾಮಕರಣ ಮಾಡಿದ್ದಾರೆ. ಹಿಂದೂ ಮುಸ್ಲಿಂ ಏಕತೆಯ ಸಂದೇಶ ಸಾರಲೋಸುಗ ರಾಮ್‌ ರಹೀಂ ಎಂದು ಹೆಸರಿಟ್ಟಿದ್ದೇವೆ ಎಂದು ಮಗುವಿನ ಅಜ್ಜಿ ಬಾನು ತಿಳಿಸಿದ್ದಾರೆ.

ಪ್ರಭಾಸ್ ‘ಕಲ್ಕಿ 2898 AD’ ಚಿತ್ರದಲ್ಲಿ ನಟಿಸಲಿದ್ದಾರೆ ಮಲಯಾಳಂ ಸ್ಟಾರ್ ನಟಿ!


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 3 =
Remember me
