ಲಖನೌ:ಆಘಾತಕಾರಿ ಘಟನೆಯೊಂದರಲ್ಲಿ ಮುಸ್ಲಿಂ ಧರ್ಮದ ಯುವಕನೊಬ್ಬ ಶಿವನ ದೇವಾಲಯಕ್ಕೆ ನುಗ್ಗಿ ಭಕ್ತರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರಪ್ರದೇಶದ ಉನ್ನಾವೋದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾಕಷ್ಟು ಖಂಡನೆಗೆ ಗುರಿಯಾಗಿದೆ.
ಘಟನೆಯು ಉನ್ನಾವೋದ ಬೋದೇಶ್ವರ ದೇವಾಲಯದಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಪಪ್ಪು (26) ಎಂದು ಗುರುತಿಸಲಾಗಿದೆ.
उन्नाव में समुदाय विशेष के युवक ने प्राचीन मन्दिर में घुसकर किया तांडव। घात लगाए बैठे मुस्लिम युवक ने मन्दिर में आए भक्तों पर किया ताबड़तोड़ हमला। मंदिर में लगे सीसीटीवी कमरे में कैद हुई घटना। घायल तीन भक्तों की गंभीर हालत को देखते हुए लखनऊ के ट्रॉमा सेंटर रेफर किया गया।pic.twitter.com/7K6NsaCYfD
ಇದನ್ನೂ ಓದಿ:VIDEO| ತಪ್ಪಾದ ಇಂಜೆಕ್ಷನ್​ನಿಂದ ಬಾಲಕಿ ಮೃತ್ಯು; ಶವ ಎಸೆದು ಆಸ್ಪತ್ರೆ ಸಿಬ್ಬಂದಿ ಪರಾರಿ
ಘಟನೆ ಕುರಿತು ಪ್ರತಿಕ್ರಿಯಿಸಿರುವ ಬಂಗಾರ್​ಮೌ ಪೊಲೀಸ್​ ಠಾಣಾಧಿಕಾರಿ ಬಂಧಿತ ಆರೋಪಿ ಯಾವ ಕಾರಣಕ್ಕೆ ದೇವಾಲಯಕ್ಕೆ ನುಗ್ಗಿ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿಲ್ಲ. ಇದೊಂದು ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಆರೋಪಿ ರಾಡ್​ನಿಂದ ದೇವಾಲಯದಲ್ಲಿದ್ದ ಭಕ್ತಾದಿಗಳ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾನೆ.
ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಈ ಪೈಕಿ ಐವರ ಸ್ಥಿತಿ ಚಿಂತಾಜನಕವಾಗಿದೆ. ಆರೋಪಿ ವಿರುದ್ಧ ಭಾರತ ದಂಡ ಸಂಹಿತೆ (IPC Section) 307 (ಕೊಲೆ ಯತ್ನ) ಅಡಿ FIR ದಾಖಲಿಸಲಾಗಿದೆ. ಶೀಘ್ರದಲ್ಲೇ ವಿಚಾರಣೆ ಮುಗಿಸಿ ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಲಾಗುವುದು ಎಂದು ಬಂಗಾರ್​ಮೌ ಪೊಲೀಸ್​ ಠಾಣಾಧಿಕಾರಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 1 =
Remember me
