ಬಿಹಾರ:ರಾಮ ನವಮಿ ಮೆರವಣಿಗೆ ವೇಳೆ ಸಸಾರಾಂನಲ್ಲಿ ಹಿಂಸಾಚಾರ ನಡೆದಿದ್ದು, ಅಂದಿನಿಂದ ಇಲ್ಲಿಯವರೆಗೆ ಹಿಂಸಾಚಾರ ನಿಂತಿಲ್ಲ. ಈ ಮಧ್ಯೆ ರಾಷ್ಟ್ರೀಯ ಜನತಾ ದಳದ ಶಾಸಕ ಮೊಹಮ್ಮದ್ ನೆಹಾಲುದ್ದೀನ್ ಈ ವಿಚಾರದಲ್ಲಿ ಅಸಂಬದ್ಧ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ.
“ಮುಸ್ಲಿಂ ಯುವಕರು ತಮ್ಮ ರಕ್ಷಣೆಗಾಗಿ ಬಾಂಬ್​ಗಳನ್ನು ತಯಾರಿಸುತ್ತಿದ್ದಾರೆ. ಹಿಂಸಾಚಾರದ ವೇಳೆ ಮುಸ್ಲಿಮರು ಸತ್ತಿದ್ದರೆ ಏನು ಮಾಡುತ್ತಿದ್ದರು. ಮುಸ್ಲಿಂ ಯುವಕರು ತಮ್ಮ ಪ್ರಾಣ ಉಳಿಸಿಕೊಳ್ಳಲು ಹೀಗೆ ಮಾಡುತ್ತಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದಲ್ಲಿ ಬಿಜೆಪಿ 40 ಸ್ಥಾನಗಳನ್ನು ಗೆಲ್ಲುವುದು ಹಾಗೂ ಬಿಹಾರದಲ್ಲಿ ರಾಷ್ಟ್ರಪತಿ ಆಳ್ವಿಕೆ ತರುವುದು ಅವರ ಗುರಿಯಾಗಿದೆ” ಎಂದು ರಾಷ್ಟ್ರೀಯ ಜನತಾ ದಳದ ಶಾಸಕ ಮೊಹಮ್ಮದ್ ನೆಹಾಲುದ್ದೀನ್ ಹೇಳಿದ್ದಾರೆ.
ಇದನ್ನೂ ಓದಿ:ಅಗತ್ಯ ಔಷಧಿಗಳ ಬೆಲೆಯಲ್ಲಿ ಶೇ.6.73ರಷ್ಟು ಇಳಿಕೆ!ರಾಮನವಮಿಯಂದು ನಡೆದ ಮೆರವಣಿಗೆಯಲ್ಲಿ ಹಿಂಸಾಚಾರ ನಡೆದಿತ್ತು. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಅಲ್ಲದೆ ಹಲವಾರು ಪೊಲೀಸ್ ತಂಡಗಳು ನಿರಂತರವಾಗಿ ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿವೆ. ಇನ್ನು ಇದುವರೆಗೂ ಪೊಲೀಸರು 109 ಮಂದಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ:ಸತ್ಯವೇ ನನ್ನ ಅಸ್ತ್ರ, ಸತ್ಯವೇ ನನ್ನ ಆಸರೆ; ರಾಹುಲ್​ ಗಾಂಧಿಹಿಂಸಾಚಾರ ಕುರಿತಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೇ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಕಿಡಿಗೇಡಿಗಳನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕತ್ತೆಯ ಹಾಲಿನಿಂದ ತಯಾರಿಸಿದ ಸಾಬೂನು ಮಹಿಳೆಯರನ್ನು ಸುಂದರವಾಗಿಸುತ್ತದೆ: ಮೇನಕಾ ಗಾಂಧಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 17 =
Remember me
