ಕೊಚ್ಚಿ:ಡ್ರೈವಿಂಗ್​ ಮಾಡುತ್ತಾ ಮೊಬೈಲ್​ ಚಾಟಿಂಗ್ ಬಿಜಿಯಾಗಿದ್ದ ಖಾಸಗಿ ಬಸ್ ಚಾಲಕನನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ವಶಕ್ಕೆ ಪಡೆದಿದೆ.
ಅಲುವಾ ಮತ್ತು ಥೀವರಾ ಮಾರ್ಗದ ನಡುವೆ ಸಂಚರಿಸುತ್ತಿದ್ದ ಖಾಸಗಿ ಬಸ್​ನಲ್ಲಿ ಚಾಲಕ ರುಬೀಶ್​ ಮೊಬೈಲ್​ನಲ್ಲಿ ಚಾಟಿಂಗ್​ ಮಾಡುತ್ತಾ ಡ್ರೈವಿಂಗ್ ಮಾಡುತ್ತಿದ್ದ. ಪ್ರಯಾಣಿಕರೊಬ್ಬರು ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಫೋಟೋ ವೈರಲ್​ ಆಗುತ್ತಿದ್ದಂತೆ ಚಾಲಕ ರುಬೀಶ್​ನನ್ನು ವಶಕ್ಕೆ ಪಡೆಯಲಾಗಿದೆ.
ಫೋಟೋವನ್ನು ನೋಡಿ ತಕ್ಷಣ ಕಾರ್ಯಪ್ರವೃತ್ತರಾದ ಎಂವಿಡಿ ಅಧಿಕಾರಿಗಳು ಬಸ್​ ಚೇಸ್​ ಮಾಡಿ ಚಾಲಕನನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ, ಬಸ್​ ಸಹ ಸೀಜ್​ ಮಾಡಲಾಗಿದ್ದು, ಸ್ಪೀಡ್​ ಗವರ್ನರ್ ಕಡಿತ ಸೇರಿದಂತೆ​ ಅನೇಕ ಗಂಭೀರ ಸ್ವರೂಪದ ಸಂಚಾರ ನಿಯಮ ಉಲ್ಲಂಘನೆಯಾಗಿರುವುದು ಗಮನಕ್ಕೆ ಬಂದಿದೆ.
ಡ್ರೈವಿಂಗ್​ ಮಾಡುವಾಗ ಮೊಬೈಲ್​ ಬಳಕೆ ಕಾನೂನಿಗೆ ವಿರುದ್ಧವಾಗಿದೆ. ಭಾರತದಲ್ಲಿ ಬಹುತೇಕರು ಡ್ರೈವಿಂಗ್​ ಮಾಡುವಾಗ ಅಥವಾ ಇನ್ನಿತರ ಸಮಯದಲ್ಲಿ ಮೊಬೈಲ್ ಬಳಕೆಯಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.(ಏಜೆನ್ಸೀಸ್​)​
ವಿಜಯವಾಣಿ ಅಚ್ಚಗನ್ನಡ ಅಭಿಯಾನ: ಬನ್ನಿ ಭಾಗವಹಿಸಿ ಬಹುಮಾನ ಗೆಲ್ಲಿ

ಗುಜರಾತ್ ಚುನಾವಣೆಗೆ 50 ಸಾವಿರ ಕೋಟಿ ರೂ. ಬೆಟ್ಟಿಂಗ್? ಬಿಜೆಪಿ ಬಹುಮತ ಪಡೆಯಲಿದೆ ಎನ್ನುತ್ತಿರುವ ಬುಕ್ಕಿಗಳು

ಟ್ವಿಟರ್​ನಿಂದ ವಜಾಗೊಂಡ ಬೆನ್ನಲ್ಲೇ ಭಾರತೀಯ ಉದ್ಯೋಗಿ ಮಾಡಿರುವ ಟ್ವೀಟ್​ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ!​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + thirteen =
Remember me
