ನವದೆಹಲಿ:2020-21ರಲ್ಲಿ ದೆಹಲಿ ಸರ್ಕಾರ ಜಾರಿಗೆ ತರಬೇಕು ಎಂದು ಉದ್ಧೇಶಿಸಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನನ್ನನ್ನು ಕಾನೂನು ಬಾಹಿರವಾಗಿ ಬಂಧಿಸಿದ್ದಾರೆ ಎಂದು ತೆಲಂಗಾಣ ಮಾಜಿ ಸಿಎಂ ಕೆಸಿಆರ್​ ಪುತ್ರಿ, ವಿಧಾನಪರಿಷತ್​ ಸದಸ್ಯೆ ಕೆ. ಕವಿತಾ ಆರೋಪಿಸಿದ್ದಾರೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕವಿತಾ ಅವರನ್ನು ಶನಿವಾರ (ಮಾರ್ಚ್​ 16) ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ಹಾಜರು ಪಡಿಸಿದ್ದಾರೆ.
ಕವಿತಾ ಅವರನ್ನು ಕಾನೂನುಬಾಹಿರವಾಗಿ ಬಂಧಿಸುವ ಮೂಲಕ ಇ.ಡಿ ಅಧಿಕಾರಿಗಳು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಅವರು (ಇ.ಡಿ ಅಧಿಕಾರಿಗಳು) ಸುಪ್ರೀಂ ಕೋರ್ಟ್ ಆದೇಶವನ್ನು ಸಂಪೂರ್ಣವಾಗಿ ಉಲ್ಲಂಘಿಸಿದ್ದಾರೆ ಎಂದು ಕವಿತಾ ಪರ ವಕೀಲರು ಆರೋಪಿಸಿದ್ದಾರೆ.
"This arrest is a blatant abuse of power. They have clearly violated the Supreme Court orders which have protected us," submits Vikram Chaudhari, a lawyer for BRS MLC K Kavitha, before Delhi Rouse Avenue court.
ಇದನ್ನೂ ಓದಿ:ಬದಲಾಗುತ್ತಾ RCB ಹೆಸರು; ಶಿವಣ್ಣ ರೊಚ್ಚಿಗೆದ್ದು ಏನ್ ಹೇಳ್ತಿದ್ದಾರೆ ಗೊತ್ತಾ?
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರ ನೈತಿಕಸ್ಥೈರ್ಯ ಕುಸಿಯುವಂತೆ ಮಾಡಲು ಬಿಜೆಪಿ ಹೆಣೆದಿರುವ ರಾಜಕೀಯ ಪಿತೂರಿಯ ಭಾಗವಾಗಿದೆ. ಕವಿತಾ ಅವರ ಬಂಧನ ಕಾನೂನು ಬಾಹಿರವಾಗಿದ್ದು, ಈ ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು ಎಂದು ಭಾರತ ರಾಷ್ಟ್ರ ಸಮಿತಿ ಪಕ್ಷ ಆಗ್ರಹಿಸಿದೆ.
ಕಾರ್ಯಕ್ರಮದ ನಿಮಿತ್ತ ಶುಕ್ರವಾರ ತೆಲಂಗಾಣದ ಹೈದರಾಬಾದ್​​ಗೆ ಭೇಟಿ ನೀಡಿ್ದ ಪ್ರಧಾನಿ ಮೋದಿ ರೋಡ್​ ಶೋ ನಡೆಸಿದ್ದರು. ರೋಡ್​ ಶೋ ನಡೆಸಿದ ಕೆಲವೇ ಗಂಟೆಗಳ ನಂತರ ಅವರನ್ನು ಬಂಧಿಸಿರುವುದು ಬಿಜೆಪಿ ಹಾಗೂ ಬಿಆರ್​ಎಸ್​ ನಡುವಿನ ರಾಜಕೀಯ ಜಟಾಪಟಿಗೆ ಕಾರಣವಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − one =
Remember me
