ಅಮರಾವತಿ:ಕೌಶಲ್ಯಭಿವೃದ್ದಿ ನಿಗಮದಲ್ಲಿನ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಸುಪ್ರೀಂ ಕೋರ್ಟ್​​ ಮೆಟ್ಟಿಲೇರಿದ್ಧಾರೆ.
ಪ್ರಕರಣ ರದ್ದು ಪಡಿಸುವ ಸಂಬಂಧ ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ ಆಂಧ್ರಪ್ರದೇಶ ಹೈಕೋರ್ಟ್​ ಚಂದ್ರಬಾಬು ನಾಯ್ಡು ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿತ್ತು. ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಚಂದ್ರಬಾಬು ನಾಯ್ಡು ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದಾರೆ.
ಇದನ್ನೂ ಓದಿ:ವಿಶ್ವಸಂಸ್ಥೆ ಸಭೆಯಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪಿಸಿದ ಪಾಕಿಸ್ತಾನ; ಪಿಒಕೆಯನ್ನು ತಕ್ಷಣವೇ ಖಾಲಿ ಮಾಡಿ: ಭಾರತ ತಿರುಗೇಟು
ಕೌಶಲ್ಯಭಿವೃದ್ದಿ ನಿಗಮದಲ್ಲಿನ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಆಂದ್ರಪ್ರದೇಶ ಸಿಐಡಿ ಚಂದ್ರಬಾಬು ನಾಯ್ಡು ಅವರನ್ನು ರಾಜಮಂಡ್ರಿಯಲ್ಲಿರುವ ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿ ವಿಚಾರಣೆಗೆ ಒಳಪಡಿಸಿದೆ. ಬೆಳಗ್ಗೆ 9 ಘಂಟೆಯಿಂದ ಸಂಜೆ 5ರ ವರೆಗೆ ವಿಚಾರಣೆಗೆ ಅವಕಾಶ ಕಲ್ಪಿಸಲಾಗಿದೆ.
ವಿಚಾರಣೆ ವೇಳೆ ಚಂದ್ರಬಾಬು ನಾಯ್ಡು ಪರ ವಕೀಲ ಡಿ. ಶ್ರೀನಿವಾಸ್​ ಉಪಸ್ಥಿತರಿರಲಿದ್ದು, ಫೋಟೋ ಹಾಗೂ ವಿಡಿಯೋಗಳನ್ನು ಬಹಿರಂಗಪಡಿಸದಂತೆ ನಿರ್ದೇಶಿಸಲಾಗಿದೆ. 12 ಅಧಿಕಾರಿಗಳನ್ನೊಳಗಂಡ ತನಿಖಾ ತಂಡವು ನಾಯ್ಡು ಅವರ ವಿಚಾರಣೆ ನಡೆಸುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
