ನಾಗ್ಪುರ:ಸೋಲಾರ್​ ಕಾರ್ಖಾನೆಯಲ್ಲಿ ಸ್ಫೋಟಕ ಸಾಮಗ್ರಿಗಳ ತಯಾರಿ ವೇಳೆ ಸಂಭವಿಸಿದ ಅಗ್ನಿ ಅವಘಡದಲ್ಲಿ 9 ಮಂದಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.
ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಘಟನೆಯಲ್ಲಿ ಅನೇಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಶೀಘ್ರವೇ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
#WATCH| Maharashtra: Visuals from Bazargaon village of Nagpur after nine people died in a blast in the Solar Explosive Company.https://t.co/BmxSR5ZapKpic.twitter.com/O4sBRCDrg2
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಘಟನೆ ಬೆಳಗ್ಗೆ 9 ಘಂಟೆ ಸುಮಾರಿಗೆ ಸೋಲಾರ್​ ಇಂಡಸ್ಟ್ರೀಸ್​ ಎಂಬ ಕಂಪನಿಯಲ್ಲಿ ಸಂಭವಿಸಿದ್ದು, ಈ ಕಂಪನಿಯಲ್ಲಿ ಸ್ಪೋಟಕ ಸಾಮಗ್ರಿಗಳನ್ನು ತಯಾರಿಸಲಾಗುತ್ತದೆ ಎಂದು ತಿಳಿದು ಬಂದಿದೆ. ಘಟನೆ ನಡೆದ ವೇಳೆ ಎಷ್ಟು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಮತ್ತು ಯಾವ ಕಾರಣಕ್ಕೆ ಸ್ಪೋಟ ಸಂಭವಿಸಿತ್ತು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆ ಕುರಿತು ಟ್ವೀಟ್​ ಮಾಡಿರುವ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವಘಡದಿಂದ ತಾವು ಆಘಾತಕ್ಕೆ ಒಳಗಾಗಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಲಾಗಿದೆ. ಗಾಯಾಳುಗಳಿಗೆ ಅಗತ್ಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಿರುವುದಾಗಿ ತಿಳಿಸಿದ್ದಾರೆ.
नागपुरातील सोलार इंडस्ट्रीजमध्ये झालेल्या स्फोटात 6 महिलांसह 9 लोकांचा मृत्यू झाल्याची घटना अतिशय दुर्दैवी आहे. मी मृतकांना भावपूर्ण श्रद्धांजली अर्पण करतो. या दुःखद प्रसंगी त्यांच्या कुटुंबियांच्या पाठीशी राज्य सरकार ठामपणे उभे आहे.संरक्षण दलासाठी ड्रोन आणि स्फोटके तयार करणारी…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:six + 11 =
Remember me
