ಅಮರಾವತಿ:ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ಬಂಧನವನ್ನು ಖಂಡಿಸಿರುವ ತೆಲುಗು ನಟ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್​ ಕಲ್ಯಾಣ್​ ಇದು ದ್ವೇಷ ರಾಜಕಾರಣದ ಪರಮಾವಧಿ ಎಂದು ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿದ ಪವನ್​ ಕಲ್ಯಾಣ್​ ಅವರನ್ನು ಬಂಧಿಸಿರುವ ರೀತಿ ಸರಿಯಿಲ್ಲ ಅವರನ್ನು ಬಂಧನವನ್ನು ನಾವು ಖಂಡಿಸುತ್ತೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿಯ ಘಟನೆಗಳು ನಡೆಯುವುದು ದುರದೃಷ್ಟಕರ ಎಂದು ಹೇಳಿದ್ದಾರೆ.
Amaravati, Andhra Pradesh | Jana Sena party President Pawan Kalyan says, "On behalf of Jana Sena, we strongly condemn the arrest of Chandrababu Naidu. Such incidents are unfortunate in a democracy. The manner in which the former Chief Minister was arrested today is sad. We are…pic.twitter.com/QGFVDDh6Ef
ಇದನ್ನೂ ಓದಿ:ನನ್ನನ್ನು ಸಚಿವನನ್ನಾಗಿ ಮಾಡದ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು; ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ.ಕೆ. ಹರಿಪ್ರಸಾದ್​ ವಾಗ್ದಾಳಿ
ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಬಂಧನವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ, ಪ್ರಜಾಪ್ರಭುತ್ವದಲ್ಲಿ ಇಂತಹ ಘಟನೆಗಳು ನಡೆಯುವುದು ದುರದೃಷ್ಟಕರ ಸಂಗತಿ. ಅವರನ್ನು ಬಂಧಿಸಿರುವ ರೀತಿ ನಮಗೆ ತುಂಬಾ ನೋವುಂಟು ಮಾಡಿದೆ. ಇದನ್ನು ನಾವು ಬಹಿರಂಗವಾಗಿಯೇ ವಿರೋಧಿಸುತ್ತೇವೆ. ಸಿಐಡಿ ಅಧಿಕಾರಿಗಳು ಆಡಳಿತ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿರುವುದು ಖಂಡನೀಯ ಎಂದಿದ್ದಾರೆ.
ಆಂಧ್ರಪ್ರದೇಶ ಕೌಶಲ್ಯಭಿವೃದ್ದಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಸಿಐಡಿ ಅಧಿಕಾರಿಗಳು ಚಂದ್ರಬಾಬು ನಾಯ್ಡು ಅವರನ್ನು ಆಂಧ್ರಪ್ರದೇಶದ ನಂದ್ಯಾಲದಲ್ಲಿ ಶನಿವಾರ ಬೆಳಗ್ಗೆ 6 ಘಂಟೆಗೆ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:nineteen − eleven =
Remember me
