ನವದೆಹಲಿ:ರಾಷ್ಟ್ರ ರಾಜಧಾನಿ ನವದೆಹಲಿಯ ಇಂದರ್​ಲೋಕ್​ ಪ್ರದೇಶದಲ್ಲಿ ರಸ್ತೆಯಲ್ಲೇ ನಮಾಜ್​ ಮಾಡುತ್ತಿದ್ದರು ಎಂಬ ಕಾರಣಕ್ಕೆ ಮುಸ್ಲಿಂ ವ್ಯಕ್ತಿಗಳ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್​ ಅಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಪೊಲೀಸ್​ ಅಧಿಕಾರಿ ನಮಾಜ್​ ಮಾಡುತ್ತಿದ್ದವರ ಮೇಲೆ ಹಲ್ಲೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು ಮತ್ತು ಸಾಕಷ್ಟು ಖಂಡನೆ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿತ್ತು.
ಅಮಾನತಾದ ಅಧಿಕಾರಿಯನ್ನು ಮನೋಜ್​ ಕುಮಾರ್​ ತೋಮರ್​ ಎಂದು ಗುರುತಿಸಲಾಗಿದ್ದು, ತಕ್ಷಣವೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗುತ್ತಿದೆ ಎಂದು ದೆಹಲಿ ಪೊಲೀಸ್​ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಘಟನೆಯು ಶುಕ್ರವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಡೆದಿದ್ದು, ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + fifteen =
Remember me
