ಕೋಲ್ಕತ:ಸತತ ಆರು ಸುತ್ತಗಳಲ್ಲಿ ಹಿನ್ನಡೆ ಅನುಭವಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೊನೆಗೂ ನಂದಿಗ್ರಾಮ ಕ್ಷೇತ್ರದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
ಸದ್ಯದ ಮಾಹಿತಿಯ ಪ್ರಕಾರ ಮಮತಾ ಬ್ಯಾನರ್ಜಿ ಅವರು 1500 ಮತಗಳ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಮೊದಲ ಆರು ಸುತ್ತು ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ ಮುನ್ನಡೆಯನ್ನು ಸಾಧಿಸಿದ್ದರು. ಟಿಎಂಸಿ ಮುನ್ನಡೆ ನಡುವೆಯೂ ವ್ಯಯಕ್ತಿಕ ಹಿನ್ನೆಡೆಯಿಂದ ಆತಂಕದಲ್ಲಿದ್ದ ಮಮತಾಗೆ ಸದ್ಯದ ಟ್ರೆಂಡ್​ ಕೊಂಚ ನಿರಾಳ ತಂದಿದೆ.
ಒಟ್ಟು 294 ವಿಧಾನಸಭಾ ಸ್ಥಾನಗಳಲ್ಲಿ ಅಧಿಕಾರದ ಗದ್ದುಗೆ ಏರಲು 147 ಮ್ಯಾಜಿಕ್​ ನಂಬರ್​ ಅವಶ್ಯಕತೆ ಇದೆ. ಸದ್ಯ ಟಿಎಂಸಿ 205 ಮತ್ತು ಬಿಜೆಪಿ 84 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದುವರೆಗೂ ಅಸ್ತಿತ್ವವೇ ಇರದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಈ ಬಾರಿ ಗಟ್ಟಿಯಾಗಿ ನಲೆಯೂರಿದ್ದು, ಟಿಎಂಸಿ ಟಕ್ಕರ್​ ಕೊಡುವ ಸಾಧ್ಯತೆ ಇದೆ. ಹೀಗಾಗಿ ಈ ಚುನಾವಣಾ ಫಲಿತಾಂಶದ ಭಾರೀ ನಿರೀಕ್ಷೆ ಇದೆ.(ಏಜೆನ್ಸೀಸ್​)
ಟಿಎಂಸಿಗೆ ಭರ್ಜರಿ ಮುನ್ನಡೆ: ಕಾರ್ಯಕರ್ತರ ಹರ್ಷೋದ್ಗಾರ- ದುಃಖದಲ್ಲಿ ಮಮತಾ ಬ್ಯಾನರ್ಜಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 18 =
Remember me
