ಹೈದರಾಬಾದ್:ಮಾಜಿ ಪ್ರಧಾನಮಂತ್ರಿ ದಿವಂಗತ ಪಿ.ವಿ. ನರಸಿಂಹ ರಾವ್ ಅವರನ್ನು ಕಡೆಗಣಿಸಿದ್ದರ ಕುರಿತು ಆರೋಪ, ಟೀಕೆಗಳನ್ನು ಎದುರಿಸುತ್ತಿದ್ದ ಕಾಂಗ್ರೆಸ್, ಈಗ ಏಕಾಏಕಿ ಅವರ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದೆ.
ದೇಶದ ಆರ್ಥಿಕ ಪರಿವರ್ತನೆಯಲ್ಲಿ ಪಿ.ವಿ. ನರಸಿಂಹರಾವ್ ನಾಯಕತ್ವ ದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಮುಖ ಪಾತ್ರ ವಹಿಸಿದೆ. 1991 ಜು. 24ರ ಕೇಂದ್ರ ಬಜೆಟ್ ದೇಶದ ಆರ್ಥಿಕ ಪರಿವರ್ತನೆಗೆ ದಾರಿ ಮಾಡಿಕೊಟ್ಟಿತು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ನರಸಿಂಹ ರಾವ್ ಅವರ ಜನ್ಮ ಶತಮಾನೋತ್ಸವ ಹಿನ್ನೆಲೆಯಲ್ಲಿ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ವರ್ಷಪೂರ್ತಿ ವಿವಿಧ ಕಾರ್ಯ ಕ್ರಮಗಳನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ತೆಲಂಗಾಣ ಕಾಂಗ್ರೆಸ್​ಗೆ ಪತ್ರ ಬರೆಯುವ ಮೂಲಕ ಸಂದೇಶ ನೀಡಿದ್ದಾರೆ. ನರಸಿಂಹರಾವ್ ಅವರ ದಿಟ್ಟ ನಾಯಕತ್ವದ ಮೂಲಕ ಅನೇಕ ಸವಾಲುಗಳನ್ನು ಯಶಸ್ವಿಯಾಗಿ ಜಯಿಸಲು ಸಾಧ್ಯವಾಯಿತು. ಅವರ ಸಾಧನೆ ಮತ್ತು ಕೊಡುಗೆಗೆ ಕಾಂಗ್ರೆಸ್ ಹೆಮ್ಮೆಪಡುತ್ತದೆ ಎಂದು ಪತ್ರದಲ್ಲಿ ಸೋನಿಯಾ ಗಾಂಧಿ ತಿಳಿಸಿ ದ್ದಾರೆ. ಪಿವಿಎನ್ ಮತ್ತು ಡಾ. ಮನಮೋಹನ್ ಸಿಂಗ್ ಉದಾರೀಕರಣ ಯುಗದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ರಾಹುಲ್ ಗಾಂಧಿ ಕೂಡ ಶ್ಲಾಘಿಸಿದ್ದಾರೆ.
ಇಷ್ಟು ವರ್ಷಗಳ ಬಳಿಕ ಸೋನಿಯಾ ಗಾಂಧಿ ಏಕಾಏಕಿ ನರಸಿಂಹ ರಾವ್ ಅವರನ್ನು ಹೊಗಳಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ. ರಾಜಕೀಯ ತಜ್ಞರು ಈ ಬಗ್ಗೆ ಹಲವು ಅಭಿಪ್ರಾಯಗಳನ್ನು ವ್ಯಕ್ತಪಡಿ ಸುತ್ತಿದ್ದಾರೆ. ಇವರಿಬ್ಬರ ನಡುವೆ ಸಾಕಷ್ಟು ಭಿನ್ನಮತ ಇತ್ತು ಎನ್ನಲಾಗಿದೆ. ನರಸಿಂಹ ರಾವ್ ನಿಧನರಾದ ವೇಳೆ ಅವರ ಅಂತ್ಯಕ್ರಿಯೆಯನ್ನು ದೆಹಲಿಯಲ್ಲಿ ನಡೆಸಲು ಬಿಡದೇ, ಪಾರ್ಥಿವ ಶರೀರವನ್ನು ಹೈದರಾಬಾದ್​ಗೆ ಕೊಂಡೊಯ್ಯಲು ಕುಟುಂಬಸ್ಥರಿಗೆ ಕಾಂಗ್ರೆಸ್ ನಾಯಕರು ಒತ್ತಡ ಹೇರಿದ್ದರು ಎಂಬ ಆರೋಪವಿದೆ.
ಕರೊನಾ ಗೆದ್ದ ರಾಜ್ಯದ ಮೊದಲ ಶತಾಯುಷಿ ಏನನ್ನುತ್ತಾರೆ ಕೇಳಿ…

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 + 7 =
Remember me
