ನವದೆಹಲಿ:ಬಹುಶಃ ದೇಶದ ಎಲ್ಲ ರಾಷ್ಟ್ರೀಯ ತನಿಖಾ ಸಂಸ್ಥೆಗಳಿಂದ ತನಿಖೆಗೊಳಗಾತ್ತಿರುವ ಶ್ರೇಯ ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್ ಸಾವಿನ ಪ್ರಕರಣದ್ದಾಗಲಿದೆಯೇನೋ?
ಸುಶಾಂತ್​ ಸಾವಿನ ಪ್ರಕರಣವನ್ನು ಆರಂಭದಲ್ಲಿ ಮುಂಬೈ ಪೊಲೀಸರು ತನಿಖೆ ನಡೆಸಿದ್ದರು. ಆದರೆ, ಸುಶಾಂತ್​ ತಂದೆ ಕೆ.ಕೆ. ಸಿಂಗ್​ ಪಟನಾದಲ್ಲಿ ಕೇಸ್​ ದಾಖಲಿಸಿದ ಬಳಿಕ ಬಿಹಾರ್​ ಪೊಲೀಸರು ಇದರ ತನಿಖೆಗಿಳಿದರು.
ಇದನ್ನೂ ಓದಿ;‘ಒಂದಲ್ಲ…8 ಹಾರ್ಡ್​ ಡ್ರೈವ್​ಗಳು…!’; ಇನ್ನೊಂದು ಸ್ಫೋಟಕ ಸತ್ಯ ಬಿಚ್ಚಿಟ್ಟ ಸುಶಾಂತ್ ಸ್ನೇಹಿತ
ಸುಶಾಂತ್​ಗೆ ಸೇರಿದ 15 ಕೋಟಿ ರೂ.ಗೂ ಹೆಚ್ಚು ಮೊತ್ತದ ಹಣ ಸುಶಾಂತ್​ ಗೆಳತಿ ರಿಯಾ ಚಕ್ರವರ್ತಿ ಅಕ್ರಮವಾಗಿ ಬಳಸಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಿಯಾ ವಿರುದ್ಧ ಕೇಸ್​ ದಾಖಲಿಸಿದರು.
ನಂತರ ಭಾರಿ ಒತ್ತಡ ಕೇಳಿ ಬಂದ ಕಾರಣ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ ಪರಿಣಾಮ, ಸದ್ಯ ಕೇಂದ್ರೀಯ ತನಿಖಾ ಸಂಸ್ಥೆ ಈ ಪ್ರಕರಣದ ತನಿಖೆ ನಡೆಸುತ್ತಿದೆ.
ಇದನ್ನೂ ಓದಿ;ಸುಶಾಂತ್​ ಸಿಂಗ್​ ರಜಪೂತ್​ ಮಾದಕ ದ್ರವ್ಯ ವ್ಯಸನಿಯೇ? ತನಿಖೆಯಲ್ಲಿ ಹೊರಬಿತ್ತು ಭಯಾನಕ ಸತ್ಯ…!
ಸುಶಾಂತ್​ ಹಾಗೂ ರಿಯಾಗೆ ಮಾದಕ ವಸ್ತು ಸರಬರಾಜು ಮಾಡಲಾಗುತ್ತಿತ್ತು ಎಂಬ ಮಾಹಿತಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ದೊರೆತ ಕಾರಣ, ಇದನ್ನು ನಾರ್ಕೋಟಿಕ್ಸ್​ ಕಂಟ್ರೋಲ್​ ಬ್ಯೂರೋ (ಎನ್​ಸಿಬಿ) ಗಮನಕ್ಕೆ ತರಲಾಗಿದೆ.
ಮನೆಯಲ್ಲಿ ಪಾರ್ಟಿ ಮಾಡುತ್ತಿದ್ದಾಗ ಸುಶಾಂತ್​ ಗಾಂಜಾ ಸುರುಳಿಗಳನ್ನು ಸುತ್ತಿಡುತ್ತಿದೆ ಎಂದು ಮನೆಗೆಲಸದ ವ್ಯಕ್ತಿ ಪೊಲೀಸರಿಗೆ ತಿಳಿಸಿದ್ದ. ಜತೆಗೆ, ಸುಶಾಂತ್​ಗೆ ನಾಲ್ಕು ಹನಿಗಳನ್ನು ಚಹಾದಲ್ಲಿ ಸೇರಿಸಿ ನೀಡು ಎಂದು ರಿಯಾ ಹೇಳಿದ ಹೇಳಿಕೆ ಕೂಡ ವೈರಲ್​ ಆಗಿದೆ. ಇದು ಮಾದಕವಸ್ತುವೇ ಆಗಿದೆ ಎಂಬ ಶಂಕೆ ವ್ಯಕ್ತವಾಗಿದೆ.ಹೀಗಾಗಿ ರಿಯಾ ಹಾಗೂ ಇತರರ ವಿರುದ್ಧ ಎಫ್​ಐಆರ್​ ದಾಖಲಿಸಿಕೊಂಡಿರುವ ಎನ್​ಸಿಬಿ ತನಿಖೆ ಮುಂದುವರಿಸಿದಿದೆ.
ನಟ ಸುಶಾಂತ್​ ಸಿಂಗ್​ ರಜಪೂತ್​ ತಿಂಗಳಿಗೆಷ್ಟು ಖರ್ಚು ಮಾಡುತ್ತಿದ್ದರು? ಹಳೇ ಮ್ಯಾನೇಜರ್​ ನೀಡಿದ್ದಾರೆ ಪೊಲೀಸರಿಗೆ ಮಾಹಿತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
