ನವದೆಹಲಿ:ನರೇಂದ್ರ ಮೋದಿ ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಎನ್‌ಡಿಎ ಸಂಸದೀಯ ಮಂಡಳಿ ಸಭೆಯಲ್ಲಿ ಮೋದಿ ಅವರು ಆಯ್ಕೆಯಾಗಿದ್ದು, ಸತತ ಮೂರನೇ ಅವಧಿಗೆ ಸರ್ಕಾರ ರಚಿಸಲು ಹಕ್ಕು ಮಂಡಿಸುವ ಮುನ್ನ ಬಿಜೆಪಿ ಹಿರಿಯ ನಾಯಕ ಎಲ್​.ಕೆ. ಅಡ್ವಾನಿ ಮತ್ತು ಮುರಳಿ ಮನೋಹರ ಜೋಶಿ ಅವರನ್ನು ಭೇಟಿಯಾಗಿ ಆರ್ಶೀವಾದ ಪಡೆದಿದ್ದಾರೆ.
ಇದನ್ನೂ ಓದಿ:ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಿ.ನಾಗೇಂದ್ರ
ಮೋದಿ ಅವರು ಇತರ 15 ಎನ್‌ಡಿಎ ನಾಯಕರೊಂದಿಗೆ ರಾಷ್ಟ್ರಪತಿ ಭವನಕ್ಕೆ ತೆರಳಲಿದ್ದು, ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.
ಜೂನ್ 9ರ ಭಾನುವಾರ ಸಂಜೆ 6 ಗಂಟೆಗೆ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಪಡೆದಿದ್ದಾರೆ. ಎನ್​ಡಿಎ 293 ಸ್ಥಾನಗಳನ್ನು ಪಡೆದು 543 ಸದಸ್ಯ ಬಲದ ಲೋಕಸಭೆಯಲ್ಲಿ ಬಹುಮತ ಪಡೆದಿದೆ.
ಫೆಬ್ರವರಿಯಲ್ಲಿ ಮೋದಿ ಅವರು ಅಡ್ವಾಣಿ ಅವರಿಗೆ ಈ ಬಾರಿ ಭಾರತ ರತ್ನ ನೀಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದರು. ನಂತರ ಮಾರ್ಚ್‌ನಲ್ಲಿ ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಭಾರತ ರತ್ನ ನೀಡಿ ಗೌರವಿಸಲಾಗಿತ್ತು.
ಕಾಂಗ್ರೆಸ್​ಗೆ ಬೆಂಬಲ ನೀಡಿದ ಮಹಾರಾಷ್ಟ್ರದ ಪಕ್ಷೇತರ ಸಂಸದ ವಿಶಾಲ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
