ಲೋಕಸಭೆ ಚುನಾವಣೆ ಫಲಿತಾಂಶದ ಪ್ರಕಾರ 543 ಲೋಕಸಭಾ ಸ್ಥಾನಗಳಲ್ಲಿ 293 ಸ್ಥಾನಗಳನ್ನು ಪಡೆದುಕೊಂಡು ಬಿಜೆಪಿ ನೇತೃತ್ವದ ಎನ್‌ಡಿಎ ಮೂರನೇ ಅವಧಿಗೆ ಮತ್ತೆ ಅಧಿಕಾರಕ್ಕೆ ಬಂದಿದೆ. ಎನ್‌ಡಿಎ ಸರ್ಕಾರದ ಪ್ರಮಾಣ ವಚನ ಪ್ರಕ್ರಿಯೆ ಚುರುಕುಗೊಂಡಿದ್ದು ಈ ಮೊದಲು ಪ್ರಮಾಣವಚದ ಸ್ವೀಕಾರ ಸಮಾರಂಭ ಜೂನ್​ 8ರಂದು ನಡೆಯಲಿದೆ ಎನ್ನಲಾಗಿತ್ತು. ಆದರೆ ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕ ಬದಲಾಗಿದ್ದು, ಜೂನ್​ 9 ರಂದು ಪ್ರಧಾನಿ ಮೋದಿ ಅವರ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಎಂದ ಮೂಲಗಳು ತಿಳಿಸಿವೆ.
ಇದನ್ನು ಓದಿ:ದೆಹಲಿ ನೀರಿನ ಸಮಸ್ಯೆ : 137 ಕ್ಯೂಸೆಕ್​​ ಹೆಚ್ಚುವರಿ ನೀರು ಬಿಡುವಂತೆ ಹಿಮಾಚಲಪ್ರದೇಶಕ್ಕೆ ಸುಪ್ರೀಂಕೋರ್ಟ್​ ಸೂಚನೆ
ಪ್ರಮಾಣ ವಚನ ಸಮಾರಂಭಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಬುಧವಾರ (ಜೂನ್​​ 5) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ರಾಷ್ಟ್ರಪತಿ ಮುರ್ಮು ಅವರು ಪ್ರಧಾನಿ ಮತ್ತು ಮಂತ್ರಿ ಪರಿಷತ್ತಿನ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಮತ್ತು ಹೊಸ ಸರ್ಕಾರವು ಅಧಿಕಾರ ವಹಿಸಿಕೊಳ್ಳುವವರೆಗೂ ಅವರ ಹುದ್ದೆಯಲ್ಲಿ ಮುಂದುವರಿಯುವಂತೆ ಪ್ರಧಾನಿ ಮೋದಿ ಅವರಿಗೆ ಸೂಚಿಸಿದ್ದಾರೆ.
2019ರಲ್ಲಿ ಫಲಿತಾಂಶದ 7 ದಿನಗಳ ನಂತರ ಪ್ರಧಾನಿ ಹುದ್ದೆಗೆ ಪ್ರಮಾಣವಚನ ಸಮಾರಂಭವನ್ನು ನಡೆಸಲಾಯಿತು. 2014ರಲ್ಲಿ ಎನ್‌ಡಿಎ ಸರ್ಕಾರ ರಚನೆಯಾದಾಗ ಮೋದಿ 10 ದಿನಗಳ ನಂತರ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಬಾರಿ ಫಲಿತಾಂಶ ಪ್ರಕಟವಾದ ಬಳಿಕ 5 ದಿನಗಳ ನಂತರ ಅಂದರೆ ಜೂನ್ 9ರಂದು ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ ನಡೆದಿದೆ.
ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೂಡಲೇ ನರೇಂದ್ರ ಮೋದಿ ಅವರ ಹೆಸರಿಗೆ ಹೊಸ ದಾಖಲೆ ಸೇರ್ಪಡೆಯಾಗಲಿದೆ. ಸತತ ಮೂರನೇ ಬಾರಿಗೆ ಚುನಾವಣೆಯಲ್ಲಿ ಗೆದ್ದು ದೇಶದ ಪ್ರಧಾನಿಯಾದ ರಾಷ್ಟ್ರದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಲಿದ್ದಾರೆ. ಈ ಹಿಂದೆ ಈ ದಾಖಲೆ ಜವಾಹರ್​​​​​ಲಾಲ್​​ ನೆಹರು ಅವರ ಹೆಸರಿನಲ್ಲಿತ್ತು. (ಏಜೆನ್ಸೀಸ್​)
ಹೀರಾಮಂಡಿ ನಟನನ್ನು ನ್ಯೂ ಸುಶಾಂತ್​ ಸಿಂಗ್​ ಎಂದಿದ್ದೇಕೆ ನೆಟ್ಟಿಗರು: ಅದಕ್ಕೆ ತಾಹಾ ಶಾ ಹೇಳಿದ್ದೇನು?

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:seven − five =
Remember me
