ನವದೆಹಲಿ:ಲೋಕಸಭೆ ಚುಣಾವಣೆ 2024ರಲ್ಲಿ ಎನ್​ಡಿಎ ಗೆಲುವಿನ ನಂತರ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಹಲವು ರೀತಿಯಲ್ಲಿ ವಿಶೇಷವಾಗಿರುತ್ತದೆ. ಈ ಸಮಾರಂಭದಲ್ಲಿ ವಿಶ್ವದಾದ್ಯಂತದ ಉನ್ನತ ನಾಯಕರು ಭಾಗವಹಿಸಿವುದು ಒಂದೆಡೆಯಾದರೆ, ಮತ್ತೊಂದೆಡೆ ನೈರ್ಮಲ್ಯ ಕಾರ್ಯಕರ್ತರು, ತೃತೀಯಲಿಂಗಿಗಳು ಮತ್ತು ಕಾರ್ಮಿಕರು ಕೂಡ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ.
ಇದನ್ನು ಓದಿ:2024ರ ಚುನಾವಣಾ ಫಲಿತಾಂಶ ಮೋದಿಯವರ ನೈತಿಕ, ರಾಜಕೀಯ, ವೈಯಕ್ತಿಕ ಸೋಲು : ಜೈರಾಮ್​ ರಮೇಶ್​​
ಈ ಬಾರಿ ಭಾರತದ ನೆರೆಯ ರಾಷ್ಟ್ರಗಳು ಮತ್ತು ಹಿಂದೂಮಹಾಸಾಗರ ಪ್ರದೇಶದ ನಾಯಕರನ್ನು ಪ್ರಧಾನಿ ಮೋದಿಯವರ ಪ್ರಮಾಣವಚನ ಸಮಾರಂಭಕ್ಕೆ ವಿಶೇಷ ಅತಿಥಿಗಳಾಗಿ ಭಾಗವಹಿಸಲು ಆಹ್ವಾನಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಗಳು ತಿಳಿಸಿವೆ. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝು, ಸೆಶೆಲ್ಸ್ ಉಪಾಧ್ಯಕ್ಷ ಅಹ್ಮದ್ ಅಫೀಫ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್, ನೇಪಾಳದ ಪ್ರಧಾನಿ ಪುಷ್ಪ ಕಮಲ್, ಭೂತಾನ್ ಪ್ರಧಾನಿ ತ್ಶೆರಿಂಗ್ ತೊಬ್ಗೇ ಅವರು ಪ್ರಧಾನಿ ಮೋದಿಯವರ ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನವನ್ನು ಸ್ವೀಕರಿಸಿದ್ದಾರೆ.
ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳುವುದಲ್ಲದೆ, ಅದೇ ದಿನ ಸಂಜೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆಯೋಜಿಸುವ ಔತಣ ಕೂಟದಲ್ಲಿ ಈ ಎಲ್ಲಾ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರದಂದು (ಜೂನ್​​ 9) ಸಂಜೆ 7.15ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಧ್ಯಕ್ಷೆ ದ್ರೌಪದಿ ಮುರ್ಮು ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ದೆಹಲಿಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ದೆಹಲಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ದೆಹಲಿ ಪೊಲೀಸರು ಜೂನ್ 9 ಮತ್ತು 10 ರಂದು ರಾಜಧಾನಿಯಲ್ಲಿ ಹಾರಾಟ ನಿಷೇಧ ವಲಯವನ್ನು ಘೋಷಿಸಿದ್ದಾರೆ. ಎಸ್‌ಪಿಜಿ, ಅಧ್ಯಕ್ಷರ ಭದ್ರತಾ ಸಿಬ್ಬಂದಿ, ಐಟಿಬಿಪಿ, ದೆಹಲಿ ಪೊಲೀಸ್, ಗುಪ್ತಚರ ಇಲಾಖೆ ತಂಡಗಳು, ಅರೆಸೇನಾ ಪಡೆಗಳು, ಎನ್‌ಎಸ್‌ಜಿ ಬ್ಲ್ಯಾಕ್ ಕ್ಯಾಟ್ ಕಮಾಂಡೋಸ್ ಮತ್ತು ಎನ್‌ಡಿಆರ್‌ಎಫ್ ತಂಡಗಳು ಪ್ರಮಾಣ ವಚನ ಸಮಾರಂಭದ ಭದ್ರತೆಯಲ್ಲಿ ಇರುತ್ತವೆ.
ಎತ್ತರದ ಕಟ್ಟಡಗಳಲ್ಲಿ ಆ್ಯಂಟಿ ಡ್ರೋನ್ ವ್ಯವಸ್ಥೆಯನ್ನೂ ಅಳವಡಿಸಲಾಗುತ್ತಿದೆ. ಎನ್‌ಎಸ್‌ಜಿಯೊಂದಿಗೆ ಲಭ್ಯವಿರುವ ಆಂಟಿ-ಡ್ರೋನ್ ವ್ಯವಸ್ಥೆಗಳನ್ನು ಪ್ರಮಾಣವಚನ ಸಮಾರಂಭದ ಸಮಯದಲ್ಲಿ ನಿಯೋಜಿಸಲಾಗುವುದು. ದೆಹಲಿ ಪೊಲೀಸ್ ಆಯುಕ್ತರ ಆದೇಶದಂತೆ, ಪ್ರಮಾಣ ವಚನ ಸ್ವೀಕಾರ ಸಮಾರಂಭ ಮತ್ತು ಗಣ್ಯರ ಉಪಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಗ್ಲೈಡರ್‌ಗಳು, ಮೈಕ್ರೋಲೈಟ್ ಏರ್‌ಕ್ರಾಫ್ಟ್‌ಗಳು, ರಿಮೋಟ್ ಪೈಲಟ್ ಏರ್‌ಕ್ರಾಫ್ಟ್‌ಗಳು, ಹಾಟ್ ಏರ್ ಬಲೂನ್‌ಗಳು, ಚಿಕ್ಕದಾದ ಪ್ಯಾರಜಂಪಿಂಗ್ ಅನ್ನು ನಿಷೇಧಿಸಲಾಗಿದೆ. (ಏಜೆನ್ಸೀಸ್​​)
ಶಿವರಾಜ್​ಕುಮಾರ್​ ಕುರಿತು ಅವಹೇಳನಕಾರಿ ಪೋಸ್ಟ್​: ಕುಮಾರ್​ ಬಂಗಾರಪ್ಪ ಮನೆಗೆ ಬೆಂಬಲಿಗರಿಂದ ಮುತ್ತಿಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + nine =
Remember me
