ನಾಸಿಕ್:ಬಸ್​-ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್​ನಲ್ಲಿರುವ ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ನಡೆದಿದೆ.
ಬಸ್​ ನಾಸಿಕ್​ ಕಡೆಯಿಂದ ಜಲ್​ಗಾಂವ್​ನತ್ತ ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಪೆನ್​​​​ಡ್ರೈವ್ ಹಂಚಿದ ಮಹಾನ್ ನಾಯಕನ ಬಗ್ಗೆ ಚರ್ಚೆಯಾಗಬೇಕು: ಮಾಜಿ ಸಿಎಂ ಎಚ್​ಡಿಕೆ ಆಗ್ರಹ
ಈ ಕುರಿತು ಪ್ರತಿಕ್ರಿಯಿಸಿರುವ ನಾಸಿಕ್ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ನಾಸಿಕ್​ನಿಂದ ಜಲ್​ಗಾಂವ್​ ಕಡೆ ಹೊರಟ್ಟಿದ್ದ ಬಸ್​ ಟೈರ್​ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಎದುರು ನರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ವಿಚಾರ ತಿಳಿದ ಕೂಡಲೇ ಪೊಲೀಸ್​ ಹಾಗೂ ರಕ್ಷಣಾ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಮೃತದೇಹಗಳನ್ನು ಹೊರತೆಗೆದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕೆಲ ಮೃತದೇಹಗಳು ಬಸ್​ನಡಿ ಸಿಲುಕಿಕೊಂಡಿದ್ದ ಕಾರಣ ಕಟ್​ ಮಾಡಿ ಹೊರತೆಗೆಯಬೇಕಾಯಿತು. ಮೃತರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದ್ದು, ಗುರುತು ಪತ್ತೆಯಾದವರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಬಳಿಕ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ನಾಸಿಕ್ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 2 =
Remember me
