ನವದೆಹಲಿ:ಬಿಜೆಪಿ ನಾಯಕಿ ನೂಪುರ್ ಶರ್ಮಾ ಮತ್ತು ನನೀನ್ ಜಿಂದಾಲ್ ಅವರ ಕೋಮುಪ್ರಚೋದಕ ಹೇಳಿಕೆ ಪ್ರಕರಣಗಳ ಪರಿಣಾಮ ತೀವ್ರಗೊಂಡಿದ್ದು, ದೇಶಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿವೆ. ಅದರಲ್ಲೂ ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ ದೇಶದ ಹಲವೆಡೆ ಇಂದು ಪ್ರತಿಭಟನೆಗಳು ನಡೆದಿವೆ.
ಟಿವಿಯ ಚರ್ಚೆಯ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ಉಂಟಾದ ವಿವಾದ ತೀವ್ರಗೊಂಡು ಒಂದು ಸಮುದಾಯದಿಂದ ಭಾರಿ ವಿರೋಧ ವ್ಯಕ್ತಗೊಂಡ ಕಾರಣ ಬಿಜೆಪಿಯ ವಕ್ತಾರೆ ಸ್ಥಾನದಿಂದ ನೂಪುರ್ ಶರ್ಮಾ ಅವರನ್ನು ಅಮಾನತುಗೊಳಿಸಲಾಗಿತ್ತು. ಹಾಗೆಯೇ ನವೀನ್ ಜಿಂದಾಲ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು.
ಅದಾಗ್ಯೂ ನೂಪುರ್ ಶರ್ಮಾ ವಿರುದ್ಧದ ಸಿಟ್ಟು ತಣಿಯದಿರುವುದು ಇಂದು ಗೋಚರಿಸಿದೆ. ಇಂದು ಶುಕ್ರವಾರದ ಪ್ರಾರ್ಥನೆ ಬಳಿಕ ರಾಷ್ಟ್ರ ರಾಜಧಾನಿ ಮಾತ್ರವಲ್ಲದೆ ಲಕ್ನೋ, ಪ್ರಯಾಗ್​ರಾಜ್​, ಶೋಪಿಯನ್, ಶ್ರೀನಗರ, ಕೋಲ್ಕತ ಮುಂತಾದೆಡೆ ಭಾರಿ ಪ್ರತಿಭಟನೆಗಳು ನಡೆದಿವೆ.
ದೆಹಲಿಯ ಜಾಮಾ ಮಸೀದಿ ಎದುರು ಜಮಾಯಿಸಿದ್ದ ಜನರು ನೂಪುರ್ ಶರ್ಮಾ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಕೆಲವೆಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಹೊಡೆದಾಟಗಳ ಜತೆಗೆ ವಾಹನ ಮತ್ತಿತರ ಸ್ವತ್ತುಗಳಿಗೆ ಬೆಂಕಿ ಹಾಕಿದ ಪ್ರಕರಣಗಳೂ ನಡೆದಿವೆ.
ಜಾರ್ಖಂಡ್​ನ ರಾಂಚಿಯಲ್ಲಿ ನಡೆದ ಪ್ರತಿಭಟನೆ ವೇಳೆ ಕಾನೂನು ಸುವ್ಯವಸ್ಥೆ ನಿಭಾಯಿಸಲು ನಿಯೋಜಿತರಾದ ಪೊಲೀಸರ ಮೇಲೂ ದಾಳಿಗಳು ನಡೆದಿದ್ದು, ಕೆಲವು ಪೊಲೀಸರು ಹಾಗೂ ಸ್ಥಳೀಯರು ಗಾಯಗೊಂಡಿದ್ದರು.
ಪಶ್ಚಿಮಬಂಗಾಲದಲ್ಲಿನ ಇಂದಿನ ಪ್ರತಿಭಟನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜೂ. 13ರ ಬೆಳಗ್ಗೆ 6 ಗಂಟೆಯವರೆಗೂ ಹೌರಾ ಜಿಲ್ಲೆಯಲ್ಲಿ ಇಂಟರ್​ನೆಟ್​ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ರಾಜ್ಯಾದ್ಯಂತ ಮಾಸ್ಕ್ ಕಡ್ಡಾಯ; ಕೋವಿಡ್​ ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರದಿಂದ ಮತ್ತೆ ಆದೇಶ…

ವಾಟ್ಸ್​ಆ್ಯಪ್​ ಬಳಕೆದಾರರಿಗೆ ಸಂತಸದ ಸಂಗತಿ; ಟೆಲಿಗ್ರಾಂ ಆ್ಯಪ್​ಗೆ ಪೈಪೋಟಿಯಂತೆ ಮತ್ತೊಂದು ಅಪ್​ಡೇಟ್​..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
