ಚೆನ್ನೈ:ಎರಡು ರಾಜ್ಯಗಳ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಾಜಿ ರಾಜ್ಯಪಾಲೆ ಡಾ.ತಮಿಳಿಸೈ ಸೌಂದರರಾಜನ್ ಅವರಿಗೆ ಬಿಜೆಪಿ ನಾಯಕತ್ವ ರಾಷ್ಟ್ರೀಯ ಮಟ್ಟದ ಹುದ್ದೆ ನೀಡುವ ಕುರಿತು ಚಿಂತನೆ ನಡೆಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಇದನ್ನೂ ಓದಿ:ಶತ್ರುಘ್ನ ಸಿನ್ಹಾಗೆ ಶಸ್ತ್ರಚಿಕಿತ್ಸೆ..ಆರೋಗ್ಯ ಸ್ಥಿರ
ಪ್ರಸ್ತುತ ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದೆ. ಬಿಜೆಪಿ ನಾಯಕತ್ವವು ಮಿತ್ರಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಅಧಿಕಾರ ನಡೆಸುವ ಅಗತ್ಯವೂ ಇದೆ. ಈ ನಡುವೆ ತಮಿಳುನಾಡಿನಲ್ಲಿ ಪಕ್ಷದ ಭಾರಿ ಸೋಲಿಗೆ ಕಾರಣವಾದ ಅಂಶಗಳ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಡಿಮೆ ಸ್ಥಾನಗಳನ್ನು ಗೆದ್ದಿರುವ ರಾಜ್ಯಗಳು ಹಾಗೂ ಭಾರಿ ಸೋಲು ಕಂಡಿರುವ ರಾಜ್ಯಗಳಿಗೆ ಸಂಬಂಧಿಸಿದಂತೆ ಪಕ್ಷದ ಉಸ್ತುವಾರಿಗಳ ಬದಲಾವಣೆಗೆ ಕಾರ್ಯತಂತ್ರಗಳು ಮುಂದುವರಿದಿವೆ.
ಈ ಪರಿಸ್ಥಿತಿಯಲ್ಲಿ ಎರಡು ದಿನಗಳ ಹಿಂದೆ ತಮಿಳಿಸೈ ದೆಹಲಿಗೆ ತೆರಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು. ತಮಿಳಿಸೈ ಅವರಿಗೆ ರಾಷ್ಟ್ರ ಮಟ್ಟದ ಹುದ್ದೆ ನೀಡುವ ಕುರಿತು ಅಮಿತ್ ಶಾ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಸದ್ಯ ಪಕ್ಷದ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ತಮಿಳಿಸೈ ರಾಷ್ಟ್ರೀಯ ಮಟ್ಟದ ಪಕ್ಷದ ಹುದ್ದೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಆದರೆ ಪಕ್ಷದ ದೃಷ್ಟಿಯಿಂದ ಹೈಕಮಾಂಡ್​ ತಮಿಳಿಸೈ ಅವರಿಗೆ ರಾಷ್ಟ್ರ ಮಟ್ಟದ ಹುದ್ದೆಯನ್ನು ಕಟ್ಟಿಕೊಡುತ್ತದೆಯೇ? ಅಥವಾ ಕೇಂದ್ರ ಸರ್ಕಾರವು ಯಾವುದೇ ನಾಮನಿರ್ದೇಶಿತ ಹುದ್ದೆಯನ್ನು ನೀಡುತ್ತದೆಯೇ? ಎಂಬುದನ್ನು ಕಾದುನೋಡಬೇಕಿದೆ.
‘ಹೌದು, ನಾನು ಕುಡಿದಿದ್ದೇನೆ’: ಪಬ್​ನಿಂದ ಹೊರಬಂದ ನಟಿ ಆಡಿದ ಮಾತು ವೈರಲ್​..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
