ನವದೆಹಲಿ:ಸಾರ್ವಜನಿಕ ವಲಯದ ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಎಸ್​ಬಿಐ ನೇತೃತ್ವದ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯುನಿಯನ್ಸ್​ ಕರೆ ನೀಡಿರುವ ಬ್ಯಾಂಕ್​ ಮುಷ್ಕರಕ್ಕೆ ರಾಷ್ಟ್ರವ್ಯಾಪಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ಮುಷ್ಕರದ ಎರಡನೇ ದಿನವಾದ ಇಂದು ಕೂಡ ಅನೇಕ ಬ್ಯಾಂಕುಗಳು ವಹಿವಾಟು ನಡೆಸಲಿಲ್ಲ.
ಮುಷ್ಕರಕ್ಕೆ ಕರೆ ನೀಡಿರುವ ಬ್ಯಾಂಕ್​ ಸಂಘಟನೆಗಳು, ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೇ ದೆಹಲಿಯಲ್ಲಿ ರೈತರು ನಿರಂತರವಾಗಿ ನಡೆಸುತ್ತಿರುವ ಪ್ರತಿಭಟನೆಯಂತೇ ನಾವು ಕೂಡ ಪ್ರತಿಭಟನೆಗೆ ಕೂರಬೇಕಾಗುತ್ತದೆ ಎಂದು ಎಚ್ಚರಿಸಿವೆ.
ಇದನ್ನೂ ಓದಿ:ಸದನದಲ್ಲಿ ಸದ್ದು ಮಾಡುತ್ತಿದೆ ಸಿಡಿ- ಕೋರ್ಟ್‌ಗೆ ಹೋಗಿದ್ದಕ್ಕೆ ಕೊಡಲಾಗ್ತಿದೆ ಸಮರ್ಥನೆ
ಸೋಮವಾರದ ಮುಷ್ಕರದಲ್ಲಿ ಸುಮಾರು 10 ಲಕ್ಷ ಸಿಬ್ಬಂದಿ ಭಾಗಿಯಾಗಿದ್ದರು. ಈ ವೇಳೆ ಸಾರ್ವಜನಿಕವಲಯದ ಬ್ಯಾಂಕುಗಳನ್ನು ಉಳಿಸಿ, ಸಾಮಾಜಿಕ ಬ್ಯಾಂಕಿಗ್ ವ್ಯವಸ್ಥೆ ಉಳಿಸಿ, ನಾಗರಿಕರ ಉಳಿತಾಯ ಠೇವಣಿ ರಕ್ಷಿಸಿ ಎಂದು ಸ್ಲೋಗನ್​ಗಳನ್ನು ಮುಷ್ಕರನಿರತರು ಪ್ರದರ್ಶಿಸಿದ್ದಾರೆ. ಪ್ರಮುಖ ಬ್ಯಾಂಕುಗಳ ಈ ಎರಡು ದಿನದ ಮುಷ್ಕರದಿಂದ ಗ್ರಾಹಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಸರ್ಕಾರಕ್ಕೆ ಆದಾಯದ ಹರಿವು ಹೆಚ್ಚಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಸಲದ ಬಜೆಟ್​ನಲ್ಲಿ ಖಾಸಗೀಕರಣವನ್ನು ಬಲವಾಗಿ ಪ್ರತಿಪಾದಿಸಿದ್ದಾರೆ. ಈ ದಿಸೆಯಲ್ಲಿ ಮತ್ತಷ್ಟು ಬ್ಯಾಂಕುಗಳನ್ನು ಹಾಗೂ ಒಂದು ಸರ್ಕಾರಿ ಸ್ವಾಮ್ಯದ ವಿಮಾ ಕಂಪನಿಯನ್ನು ಖಾಸಗೀಕರಣಗೊಳಿಸುವ ಮಾತನ್ನಾಡಿದ್ದಾರೆ. ಇದನ್ನು ಖಂಡಿಸಿ ಬ್ಯಾಂಕುಗಳು ದೇಶ ವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿವೆ. (ಏಜೇನ್ಸಿಸ್)
ಊರೂರು ಸುತ್ತುತ್ತಿರೋ ‘ಸಿಡಿ ಲೇಡಿ’ ಈಗ ಎಲ್ಲಿದ್ದಾಳೆ? ಎಕ್ಸ್​ಕ್ಲೂಸಿವ್​ ಮಾಹಿತಿ ಇಲ್ಲಿದೆ

ಏಲಿಯನ್‌ ಥರ ಕಾಣಿಸಲು ಮೂಗು, ತುಟಿ, ಕಿವಿ, ನಾಲಿಗೆ ಕತ್ತರಿಸಿಕೊಂಡ- ಎಲ್ಲವೂ ಅಮ್ಮನಿಗಾಗಿಯಂತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 1 =
Remember me
