ನವದೆಹಲಿ:ಭಾರತದ ನಾಗಪಟ್ಟಣಂ ಮತ್ತು ಶ್ರೀಲಂಕಾದ ಕಂಕಸಂತುರೈ ನಡುವೆ ದೋಣಿ ಸೇವೆಗೆ ವೀಡಿಯೋ ಕಾನ್ಪರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದ್ದಾರೆ. ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಮತ್ತು ಆರ್ಥಿಕ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವಲ್ಲಿ ಇದು ಪ್ರಮುಖ ಮೈಲಿಗಲ್ಲು ಎಂದು ಶ್ಲಾಘಿಸಿದ್ದಾರೆ.
ಚಾಲನೆ ಬಳಿಕ ಮಾತನಾಡಿದ ಪ್ರಧಾನಮಂತ್ರಿ, ಹೊಸ ಸೇವೆಯ ಆರಂಭವು ವ್ಯಾಪಾರ, ಪ್ರವಾಸೋದ್ಯಮ ಮತ್ತು ಜನರ ನಡುವಿನ ಸಂಬಂಧವನ್ನು ಹೆಚ್ಚಿಸುತ್ತದೆ. ಎರಡೂ ದೇಶಗಳ ಯುವಕರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಹೇಳಿದರು. ಪ್ರಗತಿ ಮತ್ತು ಅಭಿವೃದ್ಧಿಯ ಪಾಲುದಾರಿಕೆಯು ಭಾರತ, ಶ್ರೀಲಂಕಾ ದ್ವಿಪಕ್ಷೀಯ ಸಂಬಂಧದ ಪ್ರಬಲ ಸ್ತಂಭಗಳಲ್ಲಿ ಒಂದಾಗಿದೆ. ಫೆರ್ರಿ ಸೇವೆಯು ಎಲ್ಲ ಐತಿಹಾಸಿಕ ಮತ್ತು ಸಾಂಸ್ಕೃತಿಕ ಸಂಪರ್ಕಗಳನ್ನು ಜೀವಂತಗೊಳಿಸುತ್ತದೆ ಮತ್ತು ಸಂಸ್ಕೃತಿ, ವಾಣಿಜ್ಯ ಮತ್ತು ನಾಗರಿಕತೆಯ ಆಳವಾದ ಇತಿಹಾಸವನ್ನು ಹಂಚಿಕೊಳ್ಳುತ್ತದೆ. ನಾಗಪಟ್ಟಣಂ ಮತ್ತು ಹತ್ತಿರದ ಪಟ್ಟಣಗಳು ಶ್ರೀಲಂಕಾ ಸೇರಿ ಅನೇಕ ದೇಶಗಳೊಂದಿಗೆ ಸಮುದ್ರ ವ್ಯಾಪಾರಕ್ಕೆ ಬಹಳ ಹಿಂದಿನಿಂದಲೂ ಹೆಸರುವಾಸಿಯಾಗಿದೆ ಎಂದು ತಿಳಿಸಿದರು.
ಪ್ರಾಚೀನ ತಮಿಳು ಸಾಹಿತ್ಯದಲ್ಲಿ ಎರಡು ದೇಶಗಳ ನಡುವಿನ ದೋಣಿಗಳು ಮತ್ತು ಹಡಗುಗಳ ಚಲನೆಯನ್ನು ವಿವರಿಸುವ ಸಂಗಮ ಯುಗದ ಸಾಹಿತ್ಯಗಳಾದ ಪಟ್ಟಿನಪ್ಪಲೈ ಮತ್ತು ಮಣಿಮೇಕಲೈ ಬಗ್ಗೆ ಪ್ರಧಾನಿ ಮೋದಿ ಮಾತನಾಡಿದರು. ಇದೇ ಸಮಯದಲ್ಲಿ ಮಹಾನ್ ಕವಿ ಸುಬ್ರಮಣ್ಯಂ ಭಾರತಿ ಅವರ ಸಿಂಧು ನದಿಯಿಂ ಮಿಸೈ ಗೀತೆಯನ್ನು ಉಲ್ಲೇಖಿಸಿದರು.ಈ ಕವಿತೆಯಲ್ಲಿ ಭಾರತ ಮತ್ತು ಶ್ರೀಲಂಕಾವನ್ನು ಸಂರ್ಪಸುವ ಸೇತುವೆ ಬಗ್ಗೆ ಪ್ರಸ್ತಾಪಿಸಲಾಗಿದೆ.
ಶಿಪ್ಪಿಂಗ್ ಕಾರ್ಪೆರೇಷನ್ ಆಫ್ ಇಂಡಿಯಾದಿಂದ ನಿರ್ವಹಿಸಲ್ಪಡುವ ಹೈಸ್ಪೀಡ್ ನೌಕೆಯು 150 ಜನರು ಕುಳಿತುಕೊಳ್ಳುವ ಸಾಮರ್ಥ್ಯ ಹೊಂದಿದೆ. ನಾಗಪಟ್ಟಣಂ ಮತ್ತು ಕಂಕಸಂತುರೈ ನಡುವಿನ ಸುಮಾರು 110 ಕಿಲೋಮೀಟರ್ ದೂರವನ್ನು ಸುಮಾರು ಮೂರು ಗಂಟೆಗಳಲ್ಲಿ ಕ್ರಮಿಸಬಹುದು. ಇದು ಸಮುದ್ರದ ಪರಿಸ್ಥಿತಿಗಳನ್ನು ಅವಲಂಬಿಸಿರುತ್ತದೆ.
ಸಂಪರ್ಕಕ್ಕಾಗಿ ನಮ್ಮ ದೃಷ್ಟಿ ಸಾರಿಗೆ ವಲಯವನ್ನು ಮೀರಿದೆ. ಶ್ರೀಲಂಕಾದಲ್ಲಿ ಭಾರತದ ನೆರವಿನೊಂದಿಗೆ ಜಾರಿಗೆ ತಂದ ಯೋಜನೆಗಳು ಜನರಿಗೆ ಮುಟ್ಟಿವೆ. ಯುಪಿಐನಿಂದಾಗಿ ಡಿಜಿಟಲ್ ಪಾವತಿಗಳು ಭಾರತದಲ್ಲಿ ಸಾಮೂಹಿಕ ಆಂದೋಲನ ಮತ್ತು ಜೀವನ ವಿಧಾನವಾಗಿ ಮಾರ್ಪಟ್ಟಿವೆ. ಯುಪಿಐ ಮತ್ತು ಲಂಕಾ ಪೇ ಅನ್ನು ಲಿಂಕ್ ಮಾಡುವ ಮೂಲಕ ಎರಡೂ ಸರ್ಕಾರಗಳು ಫಿನ್​ಟೆಕ್ ವಲಯದ ಸಂಪರ್ಕದಲ್ಲಿ ಕಾರ್ಯನಿರ್ವಹಿಸುತ್ತಿವೆ.
| ನರೇಂದ್ರ ಮೋದಿ ಪ್ರಧಾನಮಂತ್ರಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + sixteen =
Remember me
