ಪಟಿಯಾಲ:1988ರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ, ರಾಜಕಾರಣಿ ನವಜೋತ್​ ಸಿಂಗ್​ ಸಿಧು 10 ತಿಂಗಳ ಸಜೆಯನ್ನು ಮುಗಿಸಿ ಶನಿವಾರ ಪಟಿಯಾಲ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಜೈಲಿನಿಂದ ಬಿಡುಗಡೆಯಾದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಧು ದೇಶದ ಸಂವಿಧಾನ ಅಪಾಯದಲ್ಲಿದೆ. ದೇಶದಲ್ಲಿ ಸರ್ವಾಧಿಕಾರತ್ವ ತಲೆದೂರಿದಾಗ ರಾಹುಲ್​ ಗಾಂಧಿ ನೇತೃತ್ವದಲ್ಲಿ ದೊಡ್ಡ ಕ್ರಾಂತಿ ಆಯಿತು.
ಪಂಜಾಬ್​ನಲ್ಲಿ ತನ್ನ ಬದ್ಧ ವೈರಿ ಎಎಪಿ ಆಡಳಿತ ನಡೆಸುತ್ತಿರುವುದನ್ನು ಸಹಿಸಲಾರದೆ ಬಿಜೆಪಿ ರಾಷ್ಟ್ರಪತಿ ಆಳ್ವಿಕೆ ಹೇರಲು ಯತ್ನಿಸುತ್ತಿದೆ. ಈ ಮೂಲಕ ಪಂಜಾಬ್​ ರಾಜ್ಯವನ್ನು ದುರ್ಬಲ ಮಾಡಲು ಯತ್ನಿಸುತ್ತಿದ್ದಾರೆ. ನಾನು ರಾಹುಲ್ ಗಾಂಧಿ,​ ಪ್ರಿಯಾಂಕ ಗಾಂಧಿ, ಕಾಂಗ್ರೆಸ್​ ಕಾರ್ಯಕರ್ತರ ಜೊತೆ ನಿಂತು ಇದನ್ನು ದಿಟ್ಟವಾಗಿ ಎದುರಿಸುತ್ತೇನೆ ಎಂದು ಹೇಳಿದ್ದಾರೆ.
I was supposed to be released around noon but they delayed it. They wanted media people to leave. Whenever a dictatorship came to this country a revolution has also come and this time, the name of that revolution is Rahul Gandhi. He will rattle the govt: Navjot Singh Sidhu soon…pic.twitter.com/L51NwG9b2h
ಇದನ್ನೂ ಓದಿ:ಕಾರ್ಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ; ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ
ನಾನು ನನ್ನ ಸಹೋದರ ಭಗವಂತ್​ ಮಾನ್​ ಅವರನ್ನು ಕೇಳಲು ಬಯಸುತ್ತೇನೆ, ನೀವು ಪಂಜಾಬಿನ ಜನರನ್ನು ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಏಕೆ ಮೂರ್ಖರನ್ನಾಗಿಸಿದ್ದೀರಿ. ಚುನಾವಣೆಗೂ ಮುನ್ನ ನೀವು ಹಾರಿಸಿದ ಹಾಸ್ಯ ಚಟಾಕಿಗಳು ಹಾಗೂ ಭರವಸೆಗಳು ಕೇವಲ ಕಾಗದದ ಮೇಲೆ ಉಳಿದಿದೆ ಎಂದು ಪಂಜಾಬ್​ ಸಿಎಂ ಭಗವಂತ್​ ಮಾನ್ ವಿರುದ್ದ ಹರಿಹಾಯ್ದಿದ್ದಾರೆ.
ಇನ್ನು ಜೈಲಿನಿಂದ ಬಿಡುಗಡೆಯಲ್ಲಿ ವಿಳಂಬವಾಗಿದ್ದರ ಕುರಿತು ಪ್ರತಿಕ್ರಿಯಿಸಿ ನಾನು ಹೊರಗಡೆ ಬರುವ ವೇಳೆಗೆ ಮಾಧ್ಯಮದವರು ಇಲ್ಲಿಂದ ಹೊರಟು ಹೋಗಿರುತ್ತಾರೆ ಎಂದು ನನ್ನ ಬಿಡುಗಡೆಯಲ್ಲಿ ವಿಳಂಬ ಮಾಡಿದ್ದಾರೆ ಎಂದು ಸಿಧು ಬಿಜೆಪಿ ವಿರುದ್ದ ಆರೋಪಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 14 =
Remember me
