ನವದೆಹಲಿ:ಭಾರತೀಯ ನೌಕಾಪಡೆಗೆ ಸೇರಿದ ಮಿಗ್​ 29ಕೆ ಯುದ್ಧ ವಿಮಾನ ಇಂದು ಬೆಳಗ್ಗೆ ಗೋವಾದಲ್ಲಿ ಅಪಘಾತಕ್ಕೀಡಾಗಿದೆ.
ಯುದ್ಧವಿಮಾನದ ಎಂದಿನಂತೆ ತರಬೇತಿ ಹಾರಾಟ ನಡೆಸುತ್ತಿತ್ತು. ಈ ವೇಳೆ ಪತನಗೊಂಡಿದ್ದು ಪೈಲಟ್​ಗೆ ಯಾವುದೇ ಅಪಾಯವಾಗಿಲ್ಲ. ವಿಮಾನ ಅಪಘಾತಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ನೌಕಾಪಡೆ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಗೋವಾ ಕರಾವಳಿ ತೀರದಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದ ಮಿಗ್​ 29 ಕೆ ಯುದ್ಧವಿಮಾನ ಪತನಗೊಂಡಿದೆ. ಪೈಲಟ್​​ನನ್ನು​ ಸುರಕ್ಷಿತವಾಗಿ ವಿಮಾನದಿಂದ ಹೊರಗೆ ಕರೆದು ಕೊಂಡುಬರಲಾಗಿದೆ. ಈ ಬಗ್ಗೆ ತನಿಖೆ ಕೈಗೊಳ್ಳುತ್ತೇವೆ ಎಂದು ಭಾರತೀಯ ನೌಕಾಪಡೆ ಟ್ವೀಟ್ ಮೂಲಕ ತಿಳಿಸಿದೆ.
ಈ ಯುದ್ಧ ವಿಮಾನ ವಾಸ್ಕೋದ ಐಎನ್​ಎಸ್​ ಹಂಸಾ ನೌಕಾನೆಲೆಯಿಂದ ಟೇಕ್​ ಆಫ್​ ಆಗಿ ಹಾರಾಟ ನಡೆಸುತ್ತಿತ್ತು ಎನ್ನಲಾಗಿದೆ. ಕಳೆದ ವರ್ಷ ನವೆಂಬರ್​ನಲ್ಲಿ ಕೂಡ ಮಿಗ್​ 29 ಕೆ ಯುದ್ಧ ವಿಮಾನ ಪತನವಾಗಿತ್ತು. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 9 =
Remember me
