ನವದೆಹಲಿ:ದೇಶದಲ್ಲಿ ಎರಡು ಸಾವಿರ ರೂಪಾಯಿ ನೋಟುಗಳನ್ನು ಈಗಾಗಲೇ ಹಿಂಪಡೆದುಕೊಳ್ಳಲಾಗಿದ್ದು, ಇರುವವರು ಅದನ್ನು ಸೆಪ್ಟೆಂಬರ್​ ತಿಂಗಳೊಳಗೆ ಬ್ಯಾಂಕ್​ಗೆ ನೀಡಿ ಬದಲಿಸಿಕೊಳ್ಳುವಂತೆಯೂ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸೂಚನೆ ನೀಡಿದೆ.
ಈ ಮಧ್ಯೆ ನಕ್ಸಲ್ ಬೆಂಬಲಿಗನೊಬ್ಬ ಕಂತೆಗಟ್ಟಲೆ 2 ಸಾವಿರ ರೂ. ನೋಟುಗಳೊಂದಿಗೆ ಸಿಕ್ಕಿಹಾಕಿಕೊಂಡಿದ್ದಾನೆ. ಆತನ ಬಳಿ ಹಾಗೆ ಸಿಕ್ಕಿದ್ದು ಬರೋಬ್ಬರಿ 10 ಲಕ್ಷ ರೂಪಾಯಿ. ಅಷ್ಟೂ ಮೊತ್ತ ಎರಡು ಸಾವಿರ ರೂ. ನೋಟುಗಳೇ ಆಗಿರುವುದು ಕುತೂಹಲ ಕೆರಳಿಸಿದೆ. ಕಾನೂನುಬಾಹಿರ ಶಕ್ತಿಗಳು ಎರಡು ಸಾವಿರ ರೂಪಾಯಿ ನೋಟುಗಳನ್ನು ಬಳಸಿಕೊಳ್ಳುತ್ತಿವೆಯೇ ಎಂಬ ಅನುಮಾನವನ್ನೂ ಹುಟ್ಟುಹಾಕಿದೆ.
ಇದನ್ನೂ ಓದಿ:ಮೆಟ್ರೋ ರೈಲುಗಳಲ್ಲಿ ರೀಲ್ಸ್ ಮಾಡುವಂತಿಲ್ಲ: ಕ್ರಿಯೇಟಿವ್ ಆಗಿಯೇ ಸೂಚನೆ ಕೊಟ್ಟ ಡಿಎಂಆರ್​ಸಿ
ಅಂದಹಾಗೆ ಈ ನಕ್ಸಲ್ ಬೆಂಬಲಿಗ ಸಿಕ್ಕಿಬಿದ್ದಿರುವುದು ಛತ್ತೀಸ್​ಘಡದ ಬಿಜಾಪುರ ಜಿಲ್ಲೆಯಲ್ಲಿ. ಈ ಪ್ರದೇಶದಲ್ಲಿ 23 ವರ್ಷದ ನಕ್ಸಲ್ ಬೆಂಬಲಿಗನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 10 ಲಕ್ಷ ರೂ. ಮೊತ್ತದ 2 ಸಾವಿರ ರೂ. ನೋಟುಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.
ಬಸ್​ ಡೋರೇ ಕಿತ್ತು ಹೋಯ್ತು!; ಉಚಿತ ಪ್ರಯಾಣಕ್ಕಾಗಿ ಮಹಿಳೆಯರ ‘ಶಕ್ತಿ’ ಪ್ರಯೋಗ

ಇದು ದೇಶದಲ್ಲಷ್ಟೇ ಅಲ್ಲ, ದಕ್ಷಿಣ ಏಷ್ಯಾದಲ್ಲೇ ಪ್ರಥಮ: ಈ ಆಸ್ಪತ್ರೆಯ ವೈದ್ಯರು ದೇಹದೊಳಗೇ ಓಡಾಡಿ ಪರೀಕ್ಷಿಸುತ್ತಾರೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × 3 =
Remember me
