
ರಾಯ್‍ಪುರ:ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ನಕ್ಸಲೀಯರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಲ್ಲಿ ಇಬ್ಬರು ಯೋಧರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಇದನ್ನೂ ಓದಿ:ಬ್ಯಾಂಕ್ ಸಾಲ ವಂಚನೆ ಪ್ರಕರಣ: ಹರಿಯಾಣ ಕಾಂಗ್ರೆಸ್ ಶಾಸಕನ ಮನೆ, ಕಾರ್ಖಾನೆ ಮೇಲೆ ಇಡಿ ದಾಳಿ
ರಾಜ್ಯ ಕಾರ್ಯಪಡೆಯ ಮುಖ್ಯ ಕಾನ್ಸ್‌ಟೇಬಲ್ ಭರತ್ ಲಾಲ್ ಸಾಹು ಮತ್ತು ಕಾನ್‌ಸ್ಟೆಬಲ್ ಸತೇರ್ ಸಿಂಗ್ ನಕ್ಸಲರ ದುಷ್ಕೃತ್ಯಕ್ಕೆ ಪ್ರಾಣವನ್ನು ಅರ್ಪಿಸಿದರು.
ತಾರೆಮ್ ಪೊಲೀಸ್ ಠಾಣೆ ವ್ಯಾಪ್ತಿಯ ಮಂಡಿಮಾರ್ಕಾ ಅರಣ್ಯದಲ್ಲಿ ಕಳೆದ ರಾತ್ರಿ ಐಇಡಿ ಸ್ಫೋಟ ಸಂಭವಿಸಿದೆ. ಭದ್ರತಾ ಪಡೆ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಈ ಪೈಪ್ ಬಾಂಬ್ ಸ್ಫೋಟಗೊಂಡಿದೆ.
ಈ ನಡುವೆ ಹೆಚ್ಚುವರಿ ಭದ್ರತಾ ಪಡೆಗಳನ್ನು ಘಟನೆ ನಡೆದ ಪ್ರದೇಶಕ್ಕೆ ಕಳುಹಿಸಲಾಗಿದೆ. ಗಾಯಗೊಂಡ ಎಸ್‌ಟಿಎಫ್ ಸಿಬ್ಬಂದಿಗೆ ಸೂಕ್ತ ಚಿಕಿತ್ಸೆಗಾಗಿ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ತಿಂಗಳು ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಆರು ಮಾವೋವಾದಿಗಳು ಹತರಾಗಿದ್ದರು. ನಕ್ಸಲ್ ದಾಳಿ ಪಡೆಯ ಆಧಾರಸ್ತಂಭವೆಂದು ಪರಿಗಣಿಸಲಾದ ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿಯ ಕಂಪನಿ ನಂ.6ರ ಮೇಲೆ ಭದ್ರತಾ ಪಡೆಗಳು ನಡೆಸಿದ ಅತಿ ದೊಡ್ಡ ದಾಳಿ ಇದಾಗಿತ್ತು.
ಕೇಜ್ರಿವಾಲ್ ಜಾಮೀನು ವಿಚಾರಣೆ: ಇಮ್ರಾನ್ ಖಾನ್​ಗೆ ಆದಂತೆ ನಮ್ಮ ದೇಶದಲ್ಲಾಗದು ಎಂದಿದ್ದೇಕೆ ವಕೀಲ ಸಿಂಘ್ವಿ?
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × two =
Remember me
