ಬೆಂಗಳೂರು:ನಯನತಾರಾ ಹಾಗೂ ಪತಿ ವಿಘ್ನೇಶ್ ಶಿವನ್ ಜೊತೆ  ಸರಿ ಇಲ್ಲ ಎನ್ನುವ ಸುದ್ದಿ ಹರಿದಾಡುತ್ತಿದೆ.  ಈ ಬೆನ್ನಲ್ಲೇ ನಟಿ ಇನ್​ಸ್ಟಾಗ್ರಾಮ್​​ನಲ್ಲಿ ಹಾಕಿರುವ ಪೋಸ್ಟ್​​ ಸಖತ್​ ವೈರಲ್ ಆಗುತ್ತಿದೆ.
ನಯನತಾರಾ ಅವರು ಪತಿ ವಿಘ್ನೇಶ್ ಶಿವನ್ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಅನ್​ಫಾಲೋ ಮಾಡಿದ್ದೇ ಇದಕ್ಕೆ ಕಾರಣ ಆಗಿತ್ತು. ನಂತರ ಮರಳಿ ಅವರು ವಿಘ್ನೇಶ್ ಅವರನ್ನ ಫಾಲೋ ಮಾಡೋಕೆ ಆರಂಭಿಸಿದರು. ಈ ಮಧ್ಯೆ ಅವರು ಇನ್​ಸ್ಟಾಗ್ರಾಮ್​ ಸ್ಟೇಟಸ್​ಗೆ ಹಾಕಿದ ಪೋಸ್ಟ್ ಸಾಕಷ್ಟು ಗಮನ ಸೆಳೆಯುತ್ತಿದೆ.
ಇತ್ತೀಚಿಗೆ ಸೆಲೆಬ್ರಿಟಿ ಜೋಡಿ ಬ್ರೇಕಪ್ ಆಗುವ ಮುನ್ನ ಈ ರೀತಿ ವರ್ತಿಸುತ್ತಿದ್ದಾರೆ. ಕೆಲವು ದಿನಗಳ ಹಿಂದಿನ ಭಾವನಾತ್ಮಕ ಉಲ್ಲೇಖಗಳನ್ನು ಹಂಚಿಕೊಳ್ಳುವುದು…ಪರಸ್ಪರ ಅನ್ ಫಾಲೋ ಮಾಡುವುದು…ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ಫೋಟೋಗಳನ್ನು ಅಳಿಸುವುದು. ಇದಾದ ಕೆಲವೇ ದಿನಗಳಲ್ಲಿ ಅವರು ಬೇರೆಯಾಗಿರುವುದಾಗಿ ಅಧಿಕೃತವಾಗಿ ಘೋಷಿಸುತ್ತಿದ್ದಾರೆ. ನಯನ ತನ್ನ ಪತಿಯನ್ನು ಅನ್ ಫಾಲೋ ಮಾಡಿದ್ದರಿಂದ ಈ ಸುದ್ದಿ ಮತ್ತೊಮ್ಮೆ ಮುನ್ನೆಲೆಗೆ ಬಂದಿತ್ತು.
ನಯನತಾರಾ ಅವರು ಇನ್​ಸ್ಟಾಗ್ರಾಮ್ ಸ್ಟೇಟಸ್​ನಲ್ಲಿ ‘ಹೌದು, ನಾನು ಕಳೆದುಕೊಂಡೆ’ ಎಂದು ಪೋಸ್ಟ್ ಮಾಡಿದ್ದಾರೆ. ಇದು ಅಭಿಮಾನಿಗಳಿಗೆ ಏನಾಗುತ್ತಿದೆ ಎಂದು ತಿಳಿಯದೆ ಗೊಂದಲಕ್ಕೊಳಗಾಗಿದ್ದಾರೆ.
ವಿಘ್ನೇಶ್ ಶಿವನ್ ಹಾಗೂ ನಯನತಾರಾ ಅವರು 2022ರ ಜೂನ್ 9ರಂದು ಮದುವೆ ಆದರು. ಇದಾದ ಬಳಿಕ ಇಬ್ಬರೂ ಹಾಯಾಗಿ ಸಂಸರಾ ನಡೆಸುತ್ತಾ ಬಂದರು. ಇಬ್ಬರು ಮಕ್ಕಳ ಪೋಷಕರು ಆಗಿದ್ದಾರೆ. ಆದರೆ, ಇತ್ತೀಚೆಗೆ ಯಾಕೋ ಅವರ ಮಧ್ಯೆ ಯಾವುದೂ ಸರಿ ಇಲ್ಲ ಎಂದು ಹೇಳಲಾಗುತ್ತಿದೆ. ಆದರೆ ಈ ಕುರಿತಾಗಿ ಗಾಸಿಪ್​ ಇದೆ ಅಷ್ಟೆ. ಆದರೆ ನಟಿ ಕಡೆಯಿಂದ ಯಾವುದೇ ಸ್ಪಷ್ಟನೆ ಕೂಡಾ ಇಲ್ಲ.
ಎಮೋಷನಲ್ ಪೋಸ್ಟ್ ಮಾಡಿ ಪತಿಯನ್ನು ಇನ್‌ಸ್ಟಾದಲ್ಲಿ ಅನ್ ಫಾಲೋ ಮಾಡಿದ ನಯನತಾರಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 10 =
Remember me
