ನವದೆಹಲಿ:ಕಳೆದ ವರ್ಷ ಪುಲ್ವಾಮಾದಲ್ಲಿ ದಾಳಿ ಮಾಡಿಸಿದ್ದು ನಾವೇ ಎಂದು ಪಾಕಿಸ್ತಾನವೇ ಒಪ್ಪಿಕೊಂಡಿದ್ದರೂ ಭಾರತದ ಎನ್​ಸಿಪಿಯ ಈ ಮುಖಂಡ ಅದನ್ನು ನಂಬುತ್ತಿಲ್ಲ…!
ಎನ್​ಸಿಪಿ ಮುಖಂಡ ಮಜೀದ್​ ಮೆಮೋನ್​ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ಪುಲ್ವಾಮಾ ದಾಳಿ ಮಾಡಿಸಿದ್ದು ನಾವೇ ಎಂದು ಪಾಕಿಸ್ತಾನದ ಸಚಿವರು ಸಂಸತ್ತಿನಲ್ಲಿ ಹೇಳಿದ್ದಾರೆ. ಆದರೆ ನಾವು ಅದನ್ನು ನಂಬುವುದಿಲ್ಲ. ಎನ್​ಐಎ ತನಿಖೆ ನಡೆಸುತ್ತಿದೆ. ಅದರ ವರದಿಯನ್ನು ಆದಷ್ಟು ಬೇಗ ಬಹಿರಂಗಪಡಿಸಿ, ಪ್ರಧಾನಿ ನರೇಂದ್ರ ಮೋದಿಯವರು ಅದನ್ನು ರಾಷ್ಟ್ರಕ್ಕೆ ತಿಳಿಸಬೇಕು ಎಂದಿದ್ದಾರೆ.
ಪಾಕಿಸ್ತಾನ ಸಚಿವ ಫಾವದ್​ ಚೌಧರಿ ಗುರುವಾರ ಸಂಸತ್ತಿನಲ್ಲಿ ಮಾತನಾಡುತ್ತ, 2019ರಲ್ಲಿ ಪುಲ್ವಾಮಾದಲ್ಲಿ ದಾಳಿ ಮಾಡಿಸಿದ್ದು ಇಮ್ರಾನ್ ಖಾನ್ ಸರ್ಕಾರದ ಒಂದು ಸಾಧನೆ ಎಂದು ಹೇಳಿದ್ದರು. ಅದಕ್ಕೆ ಭಾರತದ ವಿದೇಶಾಂಗ ಸಚಿವಾಲಯ, ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ.
ಪುಲ್ವಾಮಾ ದಾಳಿಯ ಸತ್ಯ ಒಪ್ಪಿಕೊಂಡ ಪಾಕಿಸ್ತಾನ; ಪ್ರಧಾನಿ ಮೋದಿ ಪ್ರತಿಕ್ರಿಯೆ ಹೀಗಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − thirteen =
Remember me
