ಮುಂಬೈ:ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಮಹಾ ವಿಕಾಸ ಅಘಾಡಿ ಸರ್ಕಾರ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂರಿಗೆ ಶೇ. 5 ಮೀಸಲಾತಿ ನೀಡಲು ಮುಂದಾಗಿದೆ. ‘ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂರಿಗೆ ಶೇ. 5 ಮೀಸಲಾತಿ ನೀಡುವ ನಿರ್ಧಾರವನ್ನು 2014ರಲ್ಲಿ ಬಾಂಬೆ ಹೈಕೋರ್ಟ್ ಎತ್ತಿಹಿಡಿದಿತ್ತು. ಈ ಕುರಿತ ಪ್ರಸ್ತಾವನೆ ಮಹಾ ವಿಕಾಸ್ ಅಘಾಡಿ ಸರ್ಕಾರದ ಮುಂದಿದ್ದು, ಸದ್ಯ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲೇ ಮೀಸಲಾತಿ ಸಂಬಂಧಿಸಿದ ಮಸೂದೆಗೆ ಅನುಮೋದನೆ ಪಡೆಯಲಾಗುವುದು’ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಹಾಗೂ ಎನ್​ಸಿಪಿ ನಾಯಕ ನವಾಬ್ ಮಲಿಕ್ ತಿಳಿಸಿದ್ದಾರೆ.
ಮೀಸಲಾತಿ ಕುರಿತು ವಿಧಾನ ಪರಿಷತ್​ನಲ್ಲಿ ಕೇಳಲಾದ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿರುವ ಅವರು, ಶಾಲೆಗಳಲ್ಲಿ ಮುಂದಿನ ಶೈಕ್ಷಣಿಕ ವರ್ಷದ ದಾಖಲಾತಿ ಆರಂಭವಾಗುವುದಕ್ಕೂ ಮೊದಲೇ ಈ ಕುರಿತು ಕ್ರಮ ಕೈಗೊಳ್ಳಲಾಗುತ್ತದೆ. ಸರ್ಕಾರಿ ಉದ್ಯೋಗದಲ್ಲೂ ಮುಸ್ಲಿಂರಿಗೆ ಶೇ. 5 ಮೀಸಲಾತಿ ನೀಡುವ ಬಗ್ಗೆ ಸರ್ಕಾರ ಕಾನೂನು ತಜ್ಞರ ಸಲಹೆ ಪಡೆಯಲು ಮುಂದಾಗಿದೆ ಎಂದಿದ್ದಾರೆ. ಆದರೆ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಚಿವ, ಎನ್​ಸಿಪಿ ನಾಯಕ ಏಕಾಂತ್ ಶಿಂಧೆ, ಮುಸ್ಲಿಂರಿಗೆ ಮೀಸಲಾತಿ ನೀಡುವ ಕುರಿತು ಯಾವುದೇ ನಿರ್ಧಾರವನ್ನೂ ಈವರೆಗೆ ಕೈಗೊಳ್ಳಲಾಗಿಲ್ಲ ಎಂದಿದ್ದಾರೆ. ಯಾವುದೇ ಸಮುದಾಯಕ್ಕೆ ಮೀಸಲಾತಿ ನೀಡುವ ಬಗ್ಗೆ ಮೈತ್ರಿ ಸರ್ಕಾರದ ಮೂರು ಪಕ್ಷಗಳ ನಾಯಕರು ಒಟ್ಟಾಗಿ ರ್ಚಚಿಸಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರಗಳನ್ನು ಕೈಗೊಳ್ಳುತ್ತಾರೆ. ಆದರೆ ಮುಸ್ಲಿಂರ ಮೀಸಲಾತಿ ಕುರಿತು ಈವರೆಗೆ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಶಿಂಧೆ ಹೇಳಿದ್ದಾರೆ.
ಮೀಸಲಾತಿ ಪ್ರಮಾಣ ಹೆಚ್ಚಳ ಗೊಂದಲ
ಮೀಸಲಾತಿ ಪ್ರಮಾಣ ಶೇ. 50 ಮೀರಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ ಈಗಾಗಲೇ ಮಹಾರಾಷ್ಟ್ರದಲ್ಲಿ ಮೀಸಲಾತಿ ಪ್ರಮಾಣ ಶೇ. 50ಕ್ಕೂ ಮೀರಿದೆ. ಪ್ರಸ್ತುತ ಅತಿ ಹೆಚ್ಚು ಮೀಸಲಾತಿ ಹೊಂದಿರುವ ರಾಜ್ಯ ಮಹಾರಾಷ್ಟ್ರ. 2019ರ ವರೆಗೆ ಶೇ. 50 ಮೀಸಲಾತಿ ಇತ್ತು. ಬಳಿಕ ಮರಾಠರಿಗೆ ಶೇ. 13 ಮೀಸಲಾತಿ ನೀಡಲಾಯಿತು. ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಕೇಂದ್ರ ಸರ್ಕಾರ ಶೇ. 10 ಮೀಸಲಾತಿ ನೀಡಿದೆ. ಎಲ್ಲವೂ ಸೇರಿದರೆ ಮೀಸಲಾತಿ ಪ್ರಮಾಣ ಶೇ. 73 ಆಗುತ್ತದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − eleven =
Remember me
